ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಹಿರಿಯ ಸಾಹಿತಿ ಬೆಳ್ಮಣ್ಣು ಅನುಬೆಳ್ಳೆ ಅವರಿಗೆ ಸನ್ಮಾನ

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಹಿರಿಯ ಸಾಹಿತಿ 51 ಕೃತಿಗಳನ್ನು ರಚಿಸಿರುವ ಬೆಳ್ಮಣ್ಣು ಅನುಬೆಳ್ಳೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಯುವ ಸಾಹಿತಿ ಬೋರುಗುಡ್ಡೆ ಇಂದುಚೇತನ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವಂದಿಸಿದರು.