ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ಗೆ ಸನ್ಮಾನ

ವರದಿ:  ವಾಲ್ಟರ್ ಮೊಂತೇರೊ, ಬೆಳ್ಮಣ್ಣು

ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಉಡುಪಿಯ ಕಿದಿಯೂರು ಹೋಟೆಲ್‍ನ ರೂಫ್ ಟಾಪ್ ಸಭಾಂಗಣದಲ್ಲಿ ಆದಿತ್ಯವಾರ ಜರಗಿದ 22ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಸ್ಥೆಯನ್ನು ಸನ್ಮಾನಿಸಿ ಗೌರವಿಸಿದರು.
ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಪರವಾಗಿ ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅವರು ಸನ್ಮಾನ ಸ್ವೀಕರಿಸಿದರು.
ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾದ ನಾಗೇಶ್ ಬಿಲ್ಲವ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಪೂರ್ವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಅಬ್ಬನಡ್ಕ ಸತೀಶ್ ಪೂಜಾರಿ, ಕಾರ್ಯದರ್ಶಿ ಸುರೇಶ್ ಕಾಸ್ರಬೈಲು, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ ಸಹಾಯ ಸಂಘದ ಅಧ್ಯಕ್ಷೆ ಲಲಿತಾ ಆಚಾರ್ಯ, ಸದಸ್ಯರಾದ ಹರೀಶ್ ಪೂಜಾರಿ, ಲೀಲಾ ಪೂಜಾರಿ, ಅಶ್ವಿನಿ ಪ್ರಭಾಕರ್, ಕಿರಣ್ ಶೆಟ್ಟಿ, ಸುದರ್ಶನ್ ಸಾಲ್ಯಾನ್, ಪ್ರಶಾಂತ್ ಕುಮಾರ್ ಸೇರಿದಂತೆ ಹಲವಾರು ಗಣ್ಯರು ಸಮಾರಂಭದಲ್ಲಿ ಉಪಸ್ಥಿತಿತರಿದ್ದರು.