JANANUDI.COM NETWORK
ನವದೆಹಲಿ:ಜ.10: ಪಂಜಾಬಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಉಂಟಾಗಿದೆ ಎಂಬ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕೈಗೊಂಡಿರುವ ಎಲ್ಲ ರೀತಿಯ ತನಿಖೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವು ಆದೇಶ ನೀಡಿದೆ.
ಇಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಮೂರ್ತಿ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ನೇತೃತ್ವದ ತ್ರೀ ಪೀಠ ಅರ್ಜಿ ವಿಚಾರಣೆ ನಡೆಸಿತ್ತು. ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪಂಜಾಬಿನಲ್ಲಾದ ಭದ್ರತಾ ಲೋಪದ ಬಗ್ಗೆ ತನಿಖೆ ನಡೆಸಲು ನಾವು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನಾಲ್ವರ ಸಮಿತಿ ರಚಿಸುತ್ತಿದ್ದೇವೆ ಎಂದು ಪ್ರಕಟಿಸಿದರು.
ಈ ಸಮಿತಿಯ ನೇತೃತ್ವವನ್ನು ಸುಪ್ರೀಂ ಕೋಟಿನ ನಿವೃತ್ತ ನ್ಯಾಯಾಧೀಶರು ವಹಿಸಲಿದ್ದು, ಡಿಜಿ ಎನ್ ಐ ಎ ಮತ್ತು ಪಂಜಾಬ್ ಪೆÇಲೀಸ್ ಬ್ಯೂರೋ ಆಫ್ ಇಂಟೆಲಿಜೆನ್ಸ್ನ ಹೆಚ್ಚುವರಿ ಮಹಾ ನಿರ್ದೇಶಕರು ಅದರ ಅಂಗವಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಪಂಜಾಬ್ ರಾಜ್ಯಕ್ಕೆ ಭೇಟಿಯ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪ ಉಂಟಾಗಿದೆ ಎಂದು ಪಂಜಾಬ್ ಸರ್ಕಾರ ಮತ್ತು ಕೇಂದ್ರ ಸರ್ಕಾರ ತನಿಕೆಯನ್ನು ನಡೆಸಲು ಪ್ರತ್ಯೇಕ ತನಿಖಾ ತಂಡಗಳನ್ನು ರಚಿಸಿದ್ದವು.
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಪಂಜಾಬಿನ ಫಿರೋಜ್ಪುರಕ್ಕೆ ಭೇಟಿ ನೀಡಲಿದ್ದರು. ಈ ಸಂದರ್ಭದಲ್ಲಿ ಅವರ ಭದ್ರತೆಯಲ್ಲಿನ ಲೋಪ ಪ್ರಕರಣದ ತನಿಖೆಗಾಗಿ ಸ್ವತಂತ್ರ ಸಮಿತಿಯನ್ನು ನೇಮಿಸಬೇಕೆಂಬ ಪಂಜಾಬಿನ ಮನವಿಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಪ್ರಧಾನಿ ಮೋದಿಯವರ ಭೇಟಿಯ ಸಂದರ್ಭದಲ್ಲಿ ಭದ್ರತಾ ಲೋಪವಾಗಿದೆ ಎಂದು ಆರೋಪಿಸಿ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ ಸಲ್ಲಿಸಲಾದ ಮನವಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.
ಪಂಜಾಬ್ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಡಿ ಎಸ್ ಪಟ್ವಾಲಿಯಾ ಅವರು ಈ ಬಗ್ಗೆ ತನಿಖೆ ನಡೆಸಲು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು ಮತ್ತು ಪಂಜಾಬ್ ಮತ್ತು ಹರಿಯಾಣದ ರಿಜಿಸ್ಟ್ರಾರ್ ಜನರಲ್ ಅವರು ಪ್ರಧಾನಿಯವರ ಪ್ರಯಾಣದ ವಿವರಗಳನ್ನು ದಾಖಲಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಕೇಂದ್ರ ಸರ್ಕಾರ ನೇಮಿಸಿರುವ ತನಿಖಾ ತಂಡದಿಂದ ನ್ಯಾಯ ಸಿಗುವ ಭರವಸೆ ಇಲ್ಲ ಎಂದು ವಾದಿಸಲು ಕೇಂದ್ರ ಸರ್ಕಾರವು ಪೆÇಲೀಸ್ ಅಧಿಕಾರಿಗಳು ಮತ್ತು ಇತರ ರಾಜ್ಯ ಅಧಿಕಾರಿಗಳಿಗೆ ಏಳು ಶೋಕಾಸ್ ನೋಟಿಸಳನ್ನು ನೀಡಿರುವುದನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠಕ್ಕೆ ವಿಷಯವನ್ನು ಪ್ರಸ್ತಾಪಿಸಲಾಯಿತು.
ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುμÁರ್ ಮೆಹ್ತಾ ಅವರು ಕನಿಷ್ಠ ಅನಾನುಕೂಲತೆ ಇರುವುದನ್ನು ಖಚಿತಪಡಿಸಿಕೊಳ್ಳುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿ ಎಂದು ವಾದಿಸಲು ಪ್ರಧಾನಿಯವರ ಭದ್ರತೆಯನ್ನು ನೋಡಿಕೊಳ್ಳುವ ವಿಶೇಷ ರಕ್ಷಣಾ ಗುಂಪಿನ ಬ್ಲೂ ಬುಕ್ ಅನ್ನು ಉಲ್ಲೇಖಿಸಿದರು.
ವಿಚಾರಣೆಯ ವೇಳೆ, ಶೋಕಾಸ್ ನೋಟಿಸಗಳ ಬಗ್ಗೆಯೂ ನ್ಯಾಯಪೀಠವು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತು. “ನಿಮ್ಮ ಶೋಕಾಸ್ ನೋಟಿಸ್ ಸಂಪೂರ್ಣವಾಗಿ ಸ್ವಯಂ-ವಿರೋಧಾಭಾಸವಾಗಿದೆ. ಸಮಿತಿಯನ್ನು ರಚಿಸುವ ಮೂಲಕ, ನೀವು ಎಸ್ ಪಿ ಜಿ ಕಾಯಿದೆಯ ಉಲ್ಲಂಘನೆಯಾಗಿದ್ದರೆ ವಿಚಾರಣೆ ಮಾಡಲು ಬಯಸುತ್ತೀರಿ ಮತ್ತು ನಂತರ ನೀವು ರಾಜ್ಯ ಮುಖ್ಯ ಕಾರ್ಯದರ್ಶಿ ಮತ್ತು ಪೆÇಲೀಸ್ ಮಹಾನಿರ್ದೇಶಕರನ್ನು ತಪ್ಪಿತಸ್ಥರೆಂದು ಪರಿಗಣಿಸುತ್ತೀರಿ. ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿದವರು ಯಾರು?” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಕೇಳಿದರು.