JANANUDI.COM NET WORK
ದೇಶದಲ್ಲಿ ಒತ್ತಾಯ ಪೂರ್ವಕವಾಗಿ ಯಾರಿಗೂ ಕೋವಿಡ್-19 ಲಸಿಕೆ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ನ್ಯಾಯಲಯಕ್ಕೆ ಸ್ಪಷ್ಟಪಡಿಸಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ ಮಾಡಿರುವ ಕೇಂದ್ರ ಸರ್ಕಾರ, ದೇಶದಲ್ಲಿ ಬಲವಂತವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೂಡ ಕೇಂದ್ರ ಸರ್ಕಾರ ಅಥವಾ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಈವರ ಫೌಂಡೇಶನ್ ಎನ್ ಜಿ ಒ. ಸಲ್ಲಿಸಿದ್ದ ಅರ್ಜಿಯಲ್ಲಿ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದು, ಇದಕ್ಕೆ ಕೇಂದ್ರ ಸರ್ಕಾರ ಈ ರೀತಿ ಉತ್ತರ ನೀಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಕೋವಿಡ್ -19 ಮಾರ್ಗಸೂಚಿಗಳು ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಬಲವಂತವಾಗಿ ಲಸಿಕೆಯನ್ನು ನೀಡುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್ ಗೆ ಮನದಟ್ಟು ಮಾಡಿಸಿದೆ.
ಭಾರತ ಸರ್ಕಾರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬಿಡುಗಡೆ ಮಾಡಿರುವ ನಿರ್ದೇಶನ ಮತ್ತು ಮಾರ್ಗಸೂಚಿಗಳು ಸಂಬಂಧಪಟ್ಟ ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಯಾವುದೇ ಬಲವಂತದ ಲಸಿಕೆಯನ್ನು ನೀಡುವುದಿಲ್ಲವೆಂದು’ ಎಂದು ಉತ್ತರವನ್ನು ಸಲ್ಲಿಸಿದೆ..
ಲಸಿಕೆ ಪ್ರಮಾಣ ಪತ್ರಗಳನ್ನು ನೀಡುವ ಬಗ್ಗೆ ವಿಕಲಾಂಗ ವ್ಯಕ್ತಿಗಳಿಗೆ ವಿನಾಯಿತಿ ನೀಡುವ ವಿಷಯದ ಕುರಿತು ಸುಪ್ರೀಂಗೆ ಸಲ್ಲಿಸಿದ ಅರ್ಜಿ ವಿಚಾರಣೆ ಬಗ್ಗೆ ಕೇಂದ್ರವು ಲಸಿಕೆ ಪ್ರಮಾಣ ಪತ್ರವನ್ನು ಕೊಂಡೊಯ್ಯುವುದನ್ನು ಕಡ್ಡಾಯಗೊಳಿಸುವ ಯಾವುದೇ ಆದೇಶ ನೀಡಿಲ್ಲ ಎಂದು ಕೇಂದ್ರವು ಉನ್ನತ ನ್ಯಾಯಾಲಯಕ್ಕೆ ಮನವರಿಕೆ ಮಾಡಿದೆ.
ಭಾರತ ಸರ್ಕಾರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬಿಡುಗಡೆ ಮಾಡಿರುವ ನಿರ್ದೇಶನ ಮತ್ತು ಮಾರ್ಗಸೂಚಿಗಳು ಸಂಬಂಧಪಟ್ಟ ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಯಾವುದೇ ಬಲವಂತದ ಲಸಿಕೆಯನ್ನು ಕಲ್ಪಿಸುವುದಿಲ್ಲ ಎಂದು ಸಲ್ಲಿಸಲಾಗಿದೆ.