ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು

ಬೆಂಗಳೂರು, ಜ.28 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರ ಮೊಮ್ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಸಿಎಂ ಯಡಿಯೂರಪ್ಪನವರ ಮಗಳು ಪದ್ಮಾವತಿ ಅವರ ಪುತ್ರಿ ಸೌಂದರ್ಯ (30) ಅವರು ನೇಣು ಬಿಗಿದುಕೊಂಡು ಇಂದು ಬೆಂಗಳೂರಿನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು,

ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇಂದು ಸೌಂದರ್ಯ ತಾವು ವಾಸವಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತದೆ. ನೇಣುಬಿಗಿದ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಮಲ್ಲಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದೀಗ ಮೂವರು ವೈದ್ಯರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಈ ವೇಳೆ ವಿಡಿಯೋ ಚಿತ್ರೀಕರಣ ಮಾಡಲಾಗಿದೆ .
ಸೌಂದರ್ಯ ಅವರ ಮೃತದೇಹದ ಕುತ್ತಿಗೆಯ ಭಾಗದಲ್ಲಿ ಮಾರ್ಕ್ ಇದೆ, ಬೇರೆ ಎಲ್ಲೂ ಮಾರ್ಕ್ ಇಲ್ಲ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರಾದ ಡಾ. ಸತೀಶ್ ಹೇಳಿಕೆ ನೀಡಿದ್ದಾರೆ. ಮರಣೋತ್ತರ ವರದಿ ಸಿದ್ದವಾಗಿದೆ. ಅಧಿಕಾರಿಗಳಿಗೆ ವರದಿಯನ್ನು ಹಸ್ತಾಂತರಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನ ವಸಂತನಗರದ ಫ್ಲ್ಯಾಟ್ ನಲ್ಲಿ ತಮ್ಮ ಮನೆಯ ರೂಮಿನಲ್ಲಿಯೇ ಸೌಂದರ್ಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು. 2018ರಲ್ಲಿ ಡಾ. ನೀರಜ್ ಜತೆ ವಿವಾಹವಾಗಿದ್ದ ಸೌಂದರ್ಯ ಅವರಿಗೆ ಪುಟ್ಟ ಮಗು ಕೂಡ ಇತ್ತು. ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇಂದು ಬೇಳಿಗ್ಗೆ 8 ಗಂಟೆಗೆ ಪತಿ ಡಾ. ನೀರಜ್ ಕೆಲಸಕ್ಕೆ ತೆರಳಿದ್ದರು. ಬೆಳಿಗ್ಗೆ 10 ಗಂಟೆಯಾದರೂ ಸೌಂದರ್ಯ ರೂಮಿನ ಬಾಗಿಲು ಬಡಿದರೂ ತೆರೆಯದಿದ್ದಾಗ ಮನೆ ಕೆಲಸದವರು ಪತಿ ನೀರಜ್ ಗೆ ಮಾಹಿತಿ ನೀಡಿದ್ದಾರೆ.