ಲಯನ್ಸ್ ಕ್ಲಬ್ ಕುಂದಾಪುರ ಮತ್ತು ನಾರಾಯಣ ವಿಶೇಷ ಮಕ್ಕಳ ಶಾಲೆ ಸಹಯೋಗದಲ್ಲಿ ವಿಶೇಷ ಮಾಹಿತಿ ಕಾರ್ಯಕ್ರಮ ಮತ್ತು ಕಲಿಕೋಪಕರಣಗಳ ವಿತರಣೆ

JANANUDI.COM NETWORK

ಲಯನ್ಸ್ ಕ್ಲಬ್ ಕುಂದಾಪುರ ಮತ್ತು ನಾರಾಯಣ ವಿಶೇಷ ಮಕ್ಕಳ ಶಾಲೆ ಇವರುಗಳ ಸಹಯೋಗದಲ್ಲಿ ವಿಶೇಷ ಮಾಹಿತಿ ಕಾರ್ಯಕ್ರಮ ಮತ್ತು ಕಲಿಕೋಪಕರಣಗಳ ವಿತರಣೆ ಕಾರ್ಯಕ್ರಮ ದಿನಾಂಕ 31.01.2022ರಂದು ಪಾಲಕರ ಸಭೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ ಇದರ ಕೋಶಾಧಿಕಾರಿ ಡಾ. ರವೀಂದ್ರರವರು ಸಂಪನ್ಮೂಲ ವ್ಯಕ್ತಿಯಾಗಿ ಆಟಿಸಂನ ಕುರಿತಂತೆ ಮತ್ತು ವಿಶೇಷ ಮಕ್ಕಳ ಪಾಲನೆಯಲ್ಲಿ ಪೋಷಕರ ಪಾತ್ರ ಮತ್ತು ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ ಇದರ ಅಧ್ಯಕ್ಷರಾದ ರಾಧಾಕೃಷ್ಣ ನಾಯಕ್ ರವರು ಲಯನ್ಸ್ ಕ್ಲಬ್ ಹಲವು ಸಮಾಜಮುಖಿ ಚಟುವಟಿಕೆಗಳನ್ನು ನಡೆಸುತ್ತಾ ಬರುತ್ತಿದೆ ಮುಂದಿನ ದಿನಗಳಲ್ಲಿ ವಿಶೇಷ ಮಕ್ಕಳಿಗಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ನಡೆಸಲಿದ್ದೇವೆ ಎಂದರು. ಇನ್ನೋರ್ವ ಅತಿಥಿ ಲಯನ್ಸ್ ಕ್ಲಬ್ ಕುಂದಾಪುರ ಇದರ ಮಾಜಿ ಅಧ್ಯಕ್ಷ ರಾದ ರಾಜೀವ್ ಕೋಟ್ಯಾನ್ ರವರು ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು ಮತ್ತು ಮುಂದಿನ ದಿನಗಳಲ್ಲಿ ವಿಶೇಷ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಮುಖ್ಯ ಅತಿಥಿಗಳಾಗಿ ಡಾ. ಜಗದೀಶ ಜೋಗಿ ಮತ್ತು ಡಾ. ಅಮ್ಮಾಜಿ ರವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ ವತಿಯಿಂದ ನೀಡಲ್ಪಟ್ಟ ಕಲಿಕೋಪಕರಣಗಳನ್ನು ಮಕ್ಕಳಿಗೆ ವಿತರಿಸಲಾಯಿತು.
ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಟ್ರಸ್ಟಿ ಮನೋರಮಾರವರು ಅತಿಥಿಗಳನ್ನು ಸ್ವಾಗತಿಸಿದರು, ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು . ಸಹಶಿಕ್ಷಕಿ ಪ್ರತಿಮಾರವರು ವಂದಿಸಿದರು. ಮುಖ್ಯ ಶಿಕ್ಷಕಿ ಪ್ರೇಮರವರು ಕಾರ್ಯಕ್ರಮ ನಿರೂಪಿಸಿದರು.