ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಟೈಲರಿಂಗ್ ತರಬೇತಿ

ವರದಿ :  ವಾಲ್ಟರ್ ಮೊಂತೇರೊ, ಬೆಳ್ಮಣ್ಣು

ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಹಾಗೂ ಜೇಸಿಐ ಬೆಳ್ಮಣ್ಣು ಇದರ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರ ನಂದಳಿಕೆ ಅಬ್ಬನಡ್ಕ

ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ

ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಬೆಳ್ಮಣ್ಣು ಜೇಸಿಐನ ಅಧ್ಯಕ್ಷರಾದ ವೀಣೇಶ್ ಅಮೀನ್ ಅವರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಆಶಾ ಆಚಾರ್ಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಟೈಲರಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಸ್ವಾಗತಿಸಿದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವಂದಿಸಿದರು.