ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವೈಜ್ಞಾನಿಕ ಅಡಿಕೆ ಕೃಷಿ ಹಾಗೂ ಮಲ್ಲಿಗೆ ಕೃಷಿ ಮಾಹಿತಿ ಕಾರ್ಯಾಗಾರ

ವರದಿ:  ವಾಲ್ಟರ್ ಮೊಂತೇರೊ, ಬೆಳ್ಮಣ್ಣು

ಉಡುಪಿ ಜಿಲ್ಲಾ ಕೃಷಿಕ ಸಂಘ ಉಡುಪಿ, ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಯುಕ್ತ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ವೈಜ್ಞಾನಿಕ ಅಡಿಕೆ ಕೃಷಿ ಹಾಗೂ ಮಲ್ಲಿಗೆ ಕೃಷಿ ಮಾಹಿತಿ ಕಾರ್ಯಾಗಾರ ಜರಗಿತು.
ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಾಗಾರವನ್ನು ಪ್ರಗತಿಪರ ಹಿರಿಯ ಕೃಷಿಕರಾದ ಬೋಳ ಕೊಲಜಾಲು ಕುಟ್ಟಿ ಪೂಜಾರಿ ಅವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷರಾದ ಬಂಟಕಲ್ಲು ರಾಮಕೃಷ್ಣ ಶರ್ಮ ಮಲ್ಲಿಗೆ ಕೃಷಿ ಮಾಹಿತಿ ನೀಡಿದರು. ಉಡುಪಿ ಜಿಲ್ಲಾ ಕೃಷಿಕ ಸಂಘದ ಪ್ರಧಾನ ಕಾರ್ಯದರ್ಶಿ ಕುದಿ ಶ್ರೀನಿವಾಸ ಭಟ್ ಅಡಿಕೆ ಕೃಷಿ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಯುವ ಕೃಷಿಕ ಪುನಾರು ರಘುನಾಥ್ ನಾಯಕ್, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವೇದಿಕೆಯಲ್ಲಿದ್ದರು.
ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಸ್ವಾಗತಿಸಿದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ವಂದಿಸಿದರು.