38 ಮಂದಿಗೆ ಮರಣದಂಡನೆ,11 ಮಂದಿಗೆ ಜೀವಾವಧಿ ಶಿಕ್ಷೆ

JANANUDI.COM NETWORK

 

ಗಾಂಧಿನಗರ : ಅಹಮದಾಬಾದ್ ಸ್ಫೋಟ ಪ್ರಕರಣಕ್ಕೆ ಸಂಬಂಧ ಪಟ್ಟಂತ್ತೆ ಗುಜರಾತ್‌ ರಾಜ್ಯದ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದು, 38 ಮಂದಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

   ಜುಲೈ 26, 2008ರಲ್ಲಿ ಅಹಮದಾಬಾದ್‌ನಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 56 ಮಂದಿ ಸಾವನ್ನಪ್ಪಿ, 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಗೋಧ್ರಾ ನಂತರದ ದಂಗೆಗೆ ಪ್ರತೀಕಾರ ತೀರಿಸಿಕೊಳ್ಳಲು ಇಂಡಿಯನ್ ಮುಜಾಹಿದೀನ್ (ಐಎಂ) ಉಗ್ರರು ಈ ಸ್ಫೋಟ ನಡೆಸಿದ್ದರು ಎಂದು ಹೇಳಲಾಗಿತ್ತು.

   ಅಹಮದಾಬಾದ್ ಸ್ಫೋಟ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಗುಜರಾತ್ ವಿಶೇಷ ನ್ಯಾಯಾಲಯ 49 ಅಪರಾಧಿಗಳ ಪೈಕಿ 38 ಮಂದಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.