JANANUDI.COM NETWORK
ಉಕ್ರೇನ್: ಉಕ್ರೇನ್ ದೇಶದ ಎರಡನೇ ಅತಿ ದೊಡ್ಡ ನಗರ ಕರ್ಕಿವ್ನಲ್ಲಿರುವ ಗ್ಯಾಸ್ ಪೈಪ್ಲೈನ್ನ್ನು ರಷ್ಯಾ ಸೇನೆ ಸ್ಫೋಟಿಸಿದೆ ಎಂದು ಉಕ್ರೇನ್ ಅಧ್ಯಕ್ಷರ ಕಚೇರಿ ಅಧಿಕೃತವಾಗಿ ತಿಳಿಸಿದೆ.
ಈ ಸ್ಫೋಟದ ಪರಿಣಾಮದಿಂದ ಪರಿಸರಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಲಿದೆ ಎಂದು ಉಕ್ರೇನ್ ಸರ್ಕಾರವು ತೀವ್ರ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ, ನಗರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಮನೆ ಕಿಟಕಿಗಳನ್ನು ಬಟ್ಟೆಯಲ್ಲಿ ಮುಚ್ಚಬೇಕು. ಜೊತೆಗೆ, ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ದ್ರವ ಪದಾರ್ಥಗಳನ್ನು ಹೆಚ್ಚು ಸೇವಿಸಬೇಕೆಂದು ಸೂಚಿಸಿದೆ.