JANANUDI.COM NETWORK
ನವದೆಹಲಿ; ಪೆಟ್ರೋಲ್, ಡೀಸೆಲ್ ಮತ್ತು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬಾರಿ ಏರಿಕೆ ಕಂಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ.
ಬೆಲೆ ಏರಿಕೆಯಿಂದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್‍ಗೆ 101.42 ರೂ. ಮತ್ತು ಡೀಸೆಲ್‍ಗೆ 85.80 ರೂ. ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.21ರೂ., ಪ್ರತಿ ಲೀಟರ್ ಡೀಸೆಲ್‍ಗೆ 87.47ರೂ, ಮುಂಬೈನಲ್ಲಿ ಲೀಟರ್ ಪೆಟ್ರೋಲ್ 110.78ರೂ, ಡೀಸೆಲ್ 94.94ರೂ, ಕೋಲ್ಕತ್ತಾದಲ್ಲಿ ಪೆಟ್ರೋಲ್ 102.16 ರೂ. ಮತ್ತು ಡೀಸೆಲ್ 90.62 ರೂ, ಚೆನ್ನೈನಲ್ಲಿ ಪೆಟ್ರೋಲ್ ದರ 102.16ರೂ, ಡೀಸೆಲ್ ದರ 92.19 ರೂಪಾಯಿಗೆ ಏರಿಕೆಯಾಗಿದೆ.
ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್ ದರದಲ್ಲಿ 50ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಬ್ಸಿಡಿ ಇಲ್ಲದ 14.2 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆ 949ಕ್ಕೆ ತಲುಪಿದೆ. ಕುಂದಾಪುರದಲ್ಲಿ 957 ರೂಪಾಯಿ ಆಗಿದೆ.