ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಪ್ರಥಮ ವರ್ಷದ ಭಜನೋತ್ಸವ ಕಾರ್ಯಕ್ರಮ

ವರದಿ:  ವಾಲ್ಟರ್ ಮೊಂತೇರೊ, ಬೆಳ್ಮಣ್ಣು

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ವೇದಿಕೆಯಲ್ಲಿ ಪ್ರಥಮ ವರ್ಷದ ಭಜನೋತ್ಸವ ಕಾರ್ಯಕ್ರಮದ ಜರಗಿತು.
ಸಮಾರಂಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜೇಸಿಐ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಬೆಳ್ಮಣ್ಣು ಜೇಸಿಐ ಅಧ್ಯಕ್ಷ ವೀಣೇಶ್ ಅಮೀನ್, ಜೇಸಿಐ ನಿಕಟ ಪೂರ್ವ ವಲಯ ಉಪಾಧ್ಯಕ್ಷ ಸತ್ಯನಾರಾಯಣ ಭಟ್, ಮಾವಿನಕಟ್ಟೆ ಶ್ರೀ ಮಹಾಮ್ಮಾಯಿ ಭಜನಾ ಮಂಡಳಿಯ ಅಧ್ಯಕ್ಷರಾದ ಗಣಪತಿ ದೇವಾಡಿಗ ಹಾಗೂ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಕುಣಿತ ಭಜನಾ ತರಬೇತುದಾರರಾದ ರಾಜೇಂದ್ರ ಶೆಟ್ಟಿಗಾರ್, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸ್ಥಾಪಕಾಧ್ಯಕ್ಷ ವಿಠಲ ಮೂಲ್ಯ, ಗೌರವಾಧ್ಯಕ್ಷ ರಾಜು ಶೆಟ್ಟಿ, ಪೂರ್ವಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ರಘುವೀರ್ ಶೆಟ್ಟಿ, ಆನಂದ ಪೂಜಾರಿ, ದಿನೇಶ್ ಬೀರೊಟ್ಟು, ರಾಜೇಶ್ ಕೋಟ್ಯಾನ್, ಸತೀಶ್ ಪೂಜಾರಿ, ಉದಯ ಅಂಚನ್ ಮೊದಲಾದವರಿದ್ದರು.
ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಸ್ವಾಗತಿಸಿದರು. ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ವಂದಿಸಿದರು.