ಪಟ್ಟಣದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ನಾಗರಿಕರು ಸಹಕರಿಸಬೇಕು. ವೈಯಕ್ತಿಕ ಹಿತದೃಷ್ಟಿಯಿಂದ ವಿರೋಧ ಬೇಡ – ಕೆ.ಆರ್.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ನಾಗರಿಕರು ಸಹಕರಿಸಬೇಕು. ವೈಯಕ್ತಿಕ ಹಿತದೃಷ್ಟಿಯಿಂದ ಯಾವುದೇ ಕಾಮಗಾರಿಗೆ ವಿರೋಧ ವ್ಯಕ್ತಪಡಿಸುವುದನ್ನು ಬಿಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ರಾಜಧಾನಿ ಮಾವಿನ ಕಾಯಿ ಮಂಡಿ ಸಮೀಪ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಪಟ್ಟಣದ ನಾಗರಿಕರ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಶ್ರೀನಿವಾಸಪುರ ಚಿಂತಾಮಣಿ ರಸ್ತೆಯಲ್ಲಿ ನಿರ್ಮಿಸಲಾಗಿರುವ ರೈಲ್ವೆ ಕೆಳಸೇತುವೆಯಲ್ಲಿ ಮಳೆಗಾಲ ನೀರು ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಆದರೆ ನೀರು ಹೊರ ಹೋಗಲು ಕಾಲುವೆ ನಿರ್ಮಿಸಲು ಸಮೀಪದ ನಾಗರಿಕರು ಅವಕಾಶ ನೀಡುತ್ತಿಲ್ಲ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಕೆ.ಹುಸೇನ್ ಸಾಬ್, ಸಹಾಯಕ ಎಂಜಿನಿಯರ್ ನಾಗರಾಜ್, ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್ ಮಲ್ಲಿಕಾರ್ಜುನ್, ಗಿತ್ತಿಗೆದಾರ ಭಕ್ತವತ್ಸಲಂ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಪರಿಸರ ಅಭಿಯಂತರ ಡಿ.ಶೇಖರರೆಡ್ಡಿ, ಸದಸ್ಯರಾದ ಭಾಸ್ಕರ್, ಸಂಜಯ್ ಸಿಂಗ್, ಶ್ರೀನಾಥ್, ಕೆ.ಅನ್ನೀಸ್ ಅಹ್ಮದ್, ಮುಖಂಡರಾದ ದಿಂಬಾಲ ಅಶೋಕ್, ಕೆ.ಕೆ.ಮಂಜುನಾಥರೆಡ್ಡಿ ಇದ್ದರು.