ಕೋಡಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಿ.ರಘುನಾಥಗೌಡ ಅವಿರೋಧವಾಗಿ ಆಯ್ಕೆ.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಕೋಡಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಿ.ರಘುನಾಥಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷೆ ಶಿವಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಸಲು ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಆದರೆ ಕಾಂಗ್ರೆಸ್ ಬೆಂಬಲಿತ ಜಿ.ರಘುನಾಥಗೌಡ ಹೊರತಾಗಿ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಪರಿಣಾಮವಾಗಿ, ಚುನಾವಣಾಧಿಕಾರಿ ಎಂ. ಶ್ರೀನಿವಾಸನ್ ಜಿ.ರಘುನಾಥಗೌಡ ಅವಿರೋಧ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು.
ಅಧ್ಯಕ್ಷರ ಆಯ್ಕೆ ಬಳಿಕ ಕಾಂಗ್ರೆಸ್ ಮುಖಂಡ ಕೋಡಿಪಲ್ಲಿ ಸುಬ್ಬರೆಡ್ಡಿ ಮಾತನಾಡಿ, ಅವಿರೋಧವಾಗಿ ಆಯ್ಕೆಯಾಗಿರುವ ಅಧ್ಯಕ್ಷರು ಗ್ರಾಮ ಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸಬೇಕು. ಸರ್ಕಾರದ ಸೌಲಭ್ಯಗಳು ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಶಾಸಕ ಕೆ.ಆರ್.ರಮೇಶ್ ಕುಮಾರ್ ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಸೌಲಭ್ಯ ಒದಗಿಸುತ್ತಿದ್ದಾರೆ. ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ. ಗ್ರಾಮಗಳು ಅಭಿವೃದ್ಧಿಯಾದಾಗ ಮಾತ್ರ ದೇಶದ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೆಡ್ಡಮ್ಮ, ಪಿಡಿಒ ಚಲಪತಿ, ಮುಖಂಡರಾದ ಕೆ.ಕೆ.ಮಂಜುನಾಥರೆಡ್ಡಿ, ವಿಶ್ವನಾಥ್, ಆರ್.ಮೋಹನ್, ಭಾಸ್ಕರ್‍ರೆಡ್ಡಿ, ಮೋಹನ್, ರಾಮಪ್ಪ, ಶಿವಪ್ಪ ಇದ್ದರು.