ಸಚಿವ ವಿ ಸೋಮಣ್ಣ ಜಾಮೀನು ಅರ್ಜಿ ತಿರಸ್ಕ್ರತ ; ಶೀಘ್ರದಲ್ಲೇ ಬಂಧನ ಸಾಧ್ಯತೆ

JANANUDI.COM NETWORK

ಬೆಂಗಳೂರು: ವಸತಿ ಸಚಿವ ವಿ ಸೋಮಣ್ಣ ಅವರ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ಧ ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ಅವರ ಮೇಲೆ  ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಇದ್ದು ಜಾಮೀನು  ಅರ್ಜಿಯನ್ನ  ವಜಾಗೊಳಿಸಿದ  ಹಿನ್ನೆಲೆಯಲ್ಲಿ ಸೋಮಣ್ಣಗೆ ಶೀಘ್ರದಲ್ಲೇ ಬಂಧನವಾಗುವ ಸಾಧ್ಯತೆಗಳಿವೆ.      

     ವಿ. ಸೋಮಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ಸಂಬಂಧ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಅವರ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ, ಸಿಆರ್ ಪಿಸಿ ಸೆಕ್ಷನ್ 438ರಡಿ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಲಾಗದು. ಈ ಹಂತದಲ್ಲಿ ಜಾಮೀನು ನೀಡಲು ಯಾವುದೇ ಸಕಾರಣಗಳಿಲ್ಲ ವಿಶೇಷ ಕೋರ್ಟ್ ಹೇಳಿದೆ.

     ಸಚಿವ ಸೋಮಣ್ಣ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿ ನ್ಯಾಯಮೂರ್ತಿ ಎಸ್.ಸುನಿಲ್ ದತ್‌ ಯಾದವ್‌ ಅವರಿದ್ದ ಏಕ ಸದಸ್ಯಪೀಠ ಶುಕ್ರವಾರ ವಿಚಾರಣೆ ನಡೆಸಿ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿತು. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿದೆ. ಜೊತೆಗೆ ಹೈಕೋರ್ಟ್ ಕೂಡ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ. ಆದಾಯಕ್ಕೆ ಮೀರಿದ ಆಸ್ತಿ ಗಳಿಕೆ ಮತ್ತು ಭಷ್ಟಾಚಾರ ಆರೋಪ ಸಂಬಂಧ ಜನಪ್ರತಿನಿಗಳ ಕೋರ್ಟ್‌ಗೆ ಖುದ್ದು ಹಾಜರಾಗಲು ವಸತಿ ಸಚಿವ ವಿ. ಸೋಮಣ್ಣ ಅವರಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಏಪ್ರಿಲ್‌ 16ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೋಮಣ್ಣ ಅವರಿಗೆ ಆದೇಶಿಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ 

   ಪ್ರಕರಣದ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಡಿವೈಎಸ್‌ಪಿ ಸಲ್ಲಿಸಿರುವ ವರದಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ಸೋಮಣ್ಣ ಮತ್ತು ಅವರ ಕುಟುಂಬದ ಸದಸ್ಯರ ಆದಾಯ ಮೂಲಗಳು ದಿನೇ ದಿನೇ ಹೇಗೆ ವೃದ್ಧಿಯಾಯಿತು ಎಂಬ ಬಗ್ಗೆ ಸೂಕ್ತ ತನಿಖೆ ನಡೆದಿಲ್ಲ. ಎಲ್ಲವನ್ನೂ ಮುಚ್ಚಿಡಲಾಗಿದೆ ಎಂಬ ಆರೋಪವನ್ನು ನ್ಯಾಯಾಲಯ ಪುರಸ್ಕರಿಸಿದೆ. ಮೂಡಲಪಾಳ್ಯದ ರಾಮಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಸೋಮಣ್ಣ ಮತ್ತು ಕುಟುಂಬದವರು ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ಸಾಕಷ್ಟು ಅಕ್ರಮ ಸ್ಥಿರಾಸ್ತಿ ಹೊಂದಿದ್ದಾರೆ. ಮಾರ್ಗದರ್ಶಿ ಮೌಲ್ಯಕ್ಕಿಂತಲೂ ಕಡಿಮೆ ದರದಲ್ಲಿ ಜಮೀನು ಖರೀದಿಸಿದ್ದಾರೆ. ಎಸಿಬಿ ತನಿಖೆಯಲ್ಲಿ ಕೇವಲ ಅವರ ವೈಯಕ್ತಿಕ ಮತ್ತು ಖಾಸಗಿ ಸಾಲಗಳ ಬಗ್ಗೆ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಸೋಮಣ್ಣ ಸಾರ್ವಜನಿಕ ಸೇವಕರಾಗಿ ಅಕ್ರಮ ಸಂಪಾದನೆ ಮಾಡುವ ಮೂಲಕ ಕ್ರಿಮಿನಲ್ ದುರ್ನಡತೆ ತೋರಿದ್ದಾರೆ. ಆದ್ದರಿಂದ, ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 1988ರ ಕಲಂ 13(1)(ಬಿ) (ಡಿ) ಮತ್ತು (ಇ) ಕಲಂ 13(2)ರ ಅಡಿ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಬೇಕು  ಎಂದು ಅವರು  ಕೋರಿದ್ದಾರೆ.