ಜನರು ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು :ತಹಶೀಲ್ದಾರ್ ಶಿರಿನ್ ತಾಜ್

ವರದಿ: ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ : ಜನರು ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು . ಸಮಸ್ಯೆಗಳನ್ನು ಹೊತ್ತುಕೊಂಡು ತಾಲ್ಲೂಕು ಕೇಂದ್ರದ ಕಚೇರಿಗಳಿಗೆ ಅಲೆಯುವುದನ್ನು ಬಿಡಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು . ತಾಲ್ಲೂಕಿನ ಚೌಡದೇನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಶನಿವಾರ ಏರ್ಪಡಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ , ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು . ಆಯಾ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಮಾಹಿತಿ ನೀಡಬೇಕು ಎಂದು ಹೇಳಿದರು . ಕಂದಾಯ ಇಲಾಖೆ ವತಿಯಿಂದ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಆದ್ಯತೆ ನೀಡಲಾಗಿದೆ . ಕೆರೆ ಅಥವಾ ಸರ್ಕಾರಿ ಜಮೀನು ಒತ್ತುವರಿ ಆಗಿರುವುದರ ಬಗ್ಗೆ ದೂರು ನೀಡಿದಲ್ಲಿ ತೆರವುಗೊಳಿಸಲಾಗುವುದು . ಸಾರ್ವಜನಿಕರ ಹಿತದೃಷ್ಟಿಯಿಂದ ಒತ್ತುವರಿ ಕುರಿತು ಸ್ವಯಂ ಪ್ರೇರಣೆಯಿಂದ ದೂರು ನೀಡಬಹುದಾಗಿದೆ ಎಂದು ಹೇಳಿದರು . ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ೩೮ ಅರ್ಜಿಗಳನ್ನು ಸ್ವೀಕರಿಸಲಾಯಿತು . ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ೭ ಕಟುಂಬಗಳಿಗೆ ತಲಾ ರೂ .೧ ಲಕ್ಷ ಮೊರಿಹಾರ ನೀಡಲಾಯಿತು .
ಶಿರಸ್ತೇದಾರ್ ಮನೋಹರಮಾನೆ , ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ , ಗ್ರಾಮ ಲೆಕ್ಕಾಧಿಕಾರಿ ಬಿ.ಎ.ಹರಿ , ಪಿಡಿಒ ಮಂಜುನಾಥ್ , ಬಿಇಒ ವಿ.ಉಮಾದೇವಿ , ಸಿಡಿಪಿಒ ರೋಸಲಿನ್ ಸತ್ಯ , ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹಪ್ಪ , ಉಪಾಧ್ಯಕ್ಷೆ ಸರಸ್ವತಮ್ಮ , ವಿವಿಧ ಇಲಾಖೆ ಅಧಿಕಾರಿಗಳಾದ ಶ್ರೀನಿವಾಸನ್ , ಧನಂಜಯ , ಎಂ.ಕೆ.ಹುಸೇನ್ ಸಾಬ್ , ನಾರಾಯನಸ್ವಾಮಿ , ಕೃಷ್ಣಪ್ಪ , ರವಿಕುಮಾರ್‌ , ಮುಖಂಡರಾದ ಬೈರೆಡ್ಡಿ , ಶಿವಾರೆಡ್ಡಿ ಇದ್ದರು .