JANANUDI.COM NETWORK
ಬಾಗಲಕೋಟೆ: “ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ 30 ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಪರಿ ಇಲ್ಲಿಗೆ ಬಂದು ನಿಂತಿದೆ’ ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ಷರ ಸ್ನಾಮೀಜಿ ತಮ್ಮ ಅನುಭವವನ್ನು ವೃಕ್ತಪಡಿಸಿದರು.
ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
“ಮಠಗಳಿಗೆ ಬಿಡುಗಡೆ ಆದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ ಆರಂಭವಾಗುತ್ತದೆ. ಇಲ್ಲದಿದ್ದರೆ ಆಗೊಲ್ಲ. ಆ ಅಧಿಕಾರಿಗಳು ಬಂದು
ನಮಗೆ ಹೇಳುತ್ತಾರೆ. ಇಷ್ಟು ರೊಕ್ಕ ಕಡಿತ ಮಾಡಿದಿದ್ದರೆ ನಿಮ್ಮ ಕೆಲಸವಂತೂ ಆಗುವುದಿಲ್ಲ ಎನ್ನುತ್ತಾರೆ’ ಎಂದು ಬೇಸರ ವ್ಯಕ್ತಪಡಿಸಿದರು.
ಮಾಜಿ ಸಿ.ಎಂ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೇವರಿಂದಲೂ ಲಂಚ ಪಡೆಯುವ ಮಟ್ಟಕ್ಕೆ ಬಿ.ಜೆ.ಪಿ. ಕಮಿಷನ್ ದಂದೆ ಬೆಳೆದು ಬಿಟ್ಟಿದೆ ಎಂದು ಲೇವಡಿ ಮಾಡಿದ್ದಾರೆ.