ಮಸೀದಿ, ದೇವಸ್ಥಾನ, ಚರ್ಚ್, ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಪೂರ್ವಾನುಮತಿ ಕಡ್ಡಾಯ

JANANUDI.COM NETWORK

ಬೆಂಗಳೂರು; ಇನ್ನು ಮುಂದೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವವರು ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ, ಈ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿಯವರು ಅರಣ್ಯ ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಸೂಚಿಸಿದ್ದಾರೆ.
ಧ್ವನಿವರ್ಧಕಗಳಲ್ಲಿ ಆಜಾನ್ ಹೇಳುತ್ತಿರುವುದನ್ನು ವಿರೋಧಿಸಿ ಹಿಂದುತ್ವ ಸಂಘಟನೆಗಳು ಸುಪ್ರಭಾತದ ಅಭಿಯಾನಕ್ಕೆ ಚಾಲನೆ ನೀಡಿತ್ತು. ಆದ್ದರಿಂದ ಧ್ವನಿ ವರ್ಧಕ ಬಳಕೆ ವಿವಾದ ರಾಜ್ಯದಲ್ಲಿ ವಿವಾದ ಎರ್ಪಟ್ಟಿತ್ತು.
ಧ್ವನಿವರ್ಧಕ ಬಳಸುವವರು ಇನ್ನು ಮುಂದೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಧ್ವನಿವರ್ಧಕದ ಶಬ್ದ ಸುಪ್ರೀಂಕೋರ್ಟ್ ನಿಗದಿಪಡಿಸಿದ ಡೆಸಿಬಲ್ ಮಿತಿ ಮೀರುವಂತಿಲ್ಲ.


ಧಾರ್ಮಿಕ ಕೇಂದ್ರಗಳಲ್ಲಿ ಮಾತ್ರವಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಭೆ, ಸಮಾರಂಭಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಧ್ವನಿವರ್ಧಕಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಳಸುವ ಎಲ್ಲಾ ಬಳಕೆದಾರರು 15 ದಿನಗಳೊಳಗೆ ಗೊತ್ತುಪಡಿಸಿದ ಪ್ರಾಧಿಕಾರದಿಂದ ಲಿಖಿತ ಅನುಮತಿಯನ್ನು ಪಡೆಯಬೇಕು. ಪಡೆಯದವರು ಸ್ವಯಂಪ್ರೇರಣೆಯಿಂದ ತೆಗೆದುಹಾಕಬೇಕು ಅಥವಾ ಗೊತ್ತುಪಡಿಸಿದ ಪ್ರಾಧಿಕಾರ ತೆಗೆದುಹಾಕಬೇಕು. ಅರ್ಜಿಯ ವಿಲೇವಾರಿಗಾಗಿ ವಿವಿಧ ಹಂತಗಳಲ್ಲಿ ಸಮಿತಿಗಳನ್ನು ರಚಿಸಲು ಸೂಚಿಸಲಾಗಿದೆ.


ಕಮಿಷನರೇಟ್ ವ್ಯಾಪ್ತಿಯಲ್ಲಿ ಕಮಿಷನರ್ ಹಾಗೂ ಇತರೆಡೆ ಡಿವೈಎಸ್ಪಿ ಅಥವಾ ತಹಶೀಲ್ದಾರ್ ಬಳಿ ಅನುಮತಿ ಪಡೆಯ ಬಹುದೆಂದು ಕೋರಲಾಗಿದೆ.