JANANUDI.COM NETWORK
ಕಾರವಾರ-ಮುಂಬೈನಿಂದ ಮಂಗಳೂರಿಗೆ ರೈಲಿನ ಮೂಲಕ ದಾಖಲೆ ಇಲ್ಲದೆ ಸಾಗಿಸುತಿದ್ದ ಎರಡು ಕೋಟಿ ರೂ.ಗಳ ಹಣವನ್ನು ಕಾರವಾರದ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ದಾಖಲೆ ಇಲ್ಲದೆ ಈ ಹಣ ಸಾಗಿಸುತ್ತಿರುವುದರಿಂದ ಇದು ಹವಾಲಾ ಹಣ ಇರಬಹುದು ಎಂದುಶಂಕಿಸಲಾಗಿದೆ.
ಆರೋಪಿಯನ್ನು ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಎಂದು ಗುರುತಿಸಲಾಗಿದೆ. ಮಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತ್ತಿದ್ದ ಮನೋಹರ್ ಸಿಂಗ್ನನ್ನು ಕಾರವಾರದ ಬಳಿ, ಬಳಿ ಟಿಕೆಟ್ ಇಲ್ಲದಕ್ಕೆ ರೈಲ್ವೆ ಪೊಲೀಸರು ದಂಡ ವಿಧಿಸಿದ್ದರು. ಈ ವೇಳೆ ಅನುಮಾನಗೊಂಡು ವಿಚಾರಣೆ ನಡೆಸಿ, ಆರ್ ಪಿ ಎಫ್ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಈ ಹಣದ ಬ್ಯಾಗ್ ಪತ್ತೆಯಾಗಿದೆ. ಬ್ಯಾಗಿನಲ್ಲಿ ಎರಡು ಸಾವಿರ ರೂ.ಗಳ ಹಣದ ಕಂತೆ ಕಂತೆಗಳು ಇದ್ದವು ಎನ್ನಲಾಗಿದೆ. ಸೂಕ್ತ ದಾಖಲೆ ಇಲ್ಲದ ಕಾರಣ ಹಣ ವಶಕ್ಕೆ ಪಡೆಯಲಾಗಿದೆ. ರೈಲ್ವೆ ಪೊಲೀಸರು ಆರೋಪಿಯನ್ನು ಕಾರವಾರ ಗ್ರಾಮಾಂತರ ಠಾಣೆಯ ಪೊಲೀಸರ ವಶಕ್ಕೆ ನೀಡಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.