ಭಂಡಾರ್ಕಾರ್ಸ್ – ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಮತ್ತು ಈ ಪರೀಕ್ಷೆಗಳನ್ನು ಎದುರಿಸಲು ಮಾಹಿತಿ ಕಾರ್ಯಕ್ರಮ

JANANUDI.COM NETWORK

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ನೀಟ್, ಸಿ.ಇ.ಟಿ, ಜೆ.ಇ.ಇ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಮತ್ತು ಈ ಪರೀಕ್ಷೆಗಳನ್ನು ಎದುರಿಸಲು ಸಿದ್ಧತೆ ನಡೆಸುವ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ.ಶಶಿಕಾಂತ್ ಹತ್ವಾರ್ ಸೂಕ್ತ ಮಾರ್ಗದರ್ಶನವನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ರಿತೇಶ್ ವಂದಿಸಿದರು.