JANANUDI.COM NETWORK
ಕುಂದಾಪುರ,ಜೂ.22: ರಂದು ಸಂತ ಜೋಸೆಫರ ಪ್ರೌಢಶಾಲೆಯ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ (21ರಂದು) ಆಚರಿಸಲಾಯಿತು. ಕುಂದಾಪುರ ಪುರಸಭೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಜಯ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ “ಯೋಗದಿಂದ ಆರೋಗ್ಯ, ಶಾಂತಿ ನೆಮ್ಮದಿ ಪ್ರಾಪ್ತಿಯಾಗುತ್ತದೆ” ಎಂದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಐವಿ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಎಲ್ಲರನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಕ ಮೈಕಲ್ ಇವರ ಮಾರ್ಗದರ್ಶನದಲ್ಲಿ ಸೂರ್ಯ ನಮಸ್ಕಾರ ಆಸನದೊಂದಿಗೆ ವಿದ್ಯಾರ್ಥಿಗಳಿಗೆ ಯೋಗಾಸನ ನಡೆಸಿಕೊಟ್ಟರು. ಯೋಗಾಸನಕ್ಕೆ ಸಂಬಂಧಿಸಿದ ವಿಡಿಯೋವನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.