ಬೈರಗಾನಪಲ್ಲಿ ಗ್ರಾಮ ಪಂಚಾಯಿತಿ : ಕಾಂಗ್ರೆಸ್ ಬೆಂಬಲಿತ ನಿರ್ಮಲ ಶಿವಾರೆಡ್ಡಿ, ಗೌರಮ್ಮ ರೆಡ್ಡಪ್ಪ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಬೈರಗಾನಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಆಭ್ಯರ್ಥಿಗಳಾದ ನಿರ್ಮಲ ಶಿವಾರೆಡ್ಡಿ, ಗೌರಮ್ಮ ರೆಡ್ಡಪ್ಪ ಕ್ರಮವಾಗಿ ಅದ್ಯಕ್ಷರು ಹಾಗೂ ಉಪಾದ್ಯಕ್ಷರಾಗಿ ಆಯ್ಕೆಯಾದರು.
ಈ ಹಿಂದೆ ಅಧ್ಯಕ್ಷರಾಗಿದ್ದ ಶುಮಾ ಶಿವಾರೆಡ್ಡಿ ಹಾಗೂ ಉಪಾಧ್ಯಕ್ಷರಾಗಿದ್ದ ಚಿನ್ನವೆಂಕಟರವಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಸಲಾಯಿತು. ಜೆಡಿಎಸ್‍ನಿಂದ ಅಧ್ಯಕ್ಷ ಸ್ಥಾನಕ್ಕೆ ¯ಕ್ಷ್ಮಿ, ಉಪಾಧ್ಯಕ್ಷ ಸ್ಥಾನಕ್ಕೆ ನೇತ್ರಾವತಿ ಸ್ಪರ್ಧಿಸಿದ್ದರು.
ಗ್ರಾಮ ಪಂಚಾಯಿತಿಯ 16 ಸದಸ್ಯರ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ತಲಾ 8 ಮತ ಪಡೆದುಕೊಂಡರು. ಚುನಾವಣಾಧಿಕಾರಿ ಕೃಷ್ಣಪ್ಪ ಲಾಟರಿ ಹಾಕಿದಾಗ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರಸ್ ಪಾಲಾಯಿತು.
ಪಿಡಿಒ ಆರ್.ರವಿಮುಮಾರ್, ಕಾರ್ಯದರ್ಶಿ ಶ್ರೀನಿವಾಸರೆಡ್ಡಿ, ಮುಖಂಡರಾದ ಸಂಜಯ್ ರೆಡ್ಡಿ, ಶಿವಾರೆಡ್ಡಿ, ಕರ್ಣಾಕರರೆಡ್ಡಿ, ರೆಡ್ಡಪ್ಪ, ಜನಾರ್ಧನ್, ಹೊಸಹುಡ್ಯ ಶಿವಾರೆಡ್ಡಿ, ಶ್ರೀರಾಮರೆಡ್ಡಿ ಇದ್ದರು.
ಹಲ್ಲೆ ಆರೋಪ: ಚುನಾವಣಾ ಫಲಿತಾಂಶದಿಂದ ಬೇಸರಗೊಂಡ ಕೆಲವು ಜೆಡಿಎಸ್ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡ ಹೊಸಹುಡ್ಡ ಶಿವಾರೆಡ್ಡಿ ಅವರ ಮೇಲೆ ಹಲ್ಲೆ ನಡೆಸಿ, ಅವರ ಕಾರ್ ಜಖಂ ಗೊಳಿಸಿರುವುದಾಗಿ ಆರೋಪಿಸಿ ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.