ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರ ರಾಷ್ಟ್ರೀಯ ಮಾದಕ ವಸ್ತು ವ್ಯಸನ-ವಿರೋಧಿ ದಿನದ ಅಂಗವಾಗಿ ಮಾದಕ ವಸ್ತು- ವ್ಯಸನದ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ.

JANANUDI.COM NETWORK

ಕುಂದಾಪುರ: ” ಮಾದಕ ವಸ್ತು ಸೇವನೆಯು ನಮ್ಮ ಸಮಾಜದ ಯುವಜನತೆಯ ಭವಿಷ್ಯಕ್ಕೆ ಮಾರಕವಾಗಿದೆ. ಈ ವ್ಯಸನದಿಂದ ಸಂಪೂರ್ಣ ದೂರವಿದ್ದು, ಮಾದಕ ವ್ಯಸನ ಸಂಬಂಧಿತ ಪ್ರಬಲ ಕಾನೂನುಗಳ ಬಗ್ಗೆ ಅರಿವು ಹೊಂದಿರಬೇಕು” ಎಂದು ಕುಂದಾಪುರದ ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಂತರ ರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರ ಪೋಲೀಸ್ ಠಾಣಾಧಿಕಾರಿ ಶ್ರೀ ಸದಾಶಿವ ಗವರೋಜಿಯವರು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿ ಮಾದಕ ವ್ಯಸನ ಪಿಡುಗಿನ ಗಂಭೀರ ಪರಿಣಾಮಗಳ ಬಗ್ಗೆ ಜಾಗೃತರಾಗಬೇಕೆಂದು ತಿಳಿಸಿದರು.
ಹಿಂದಿ ವಿಭಾಗ ಮುಖ್ಯಸ್ಥೆ ಶ್ರೀಮತಿ ಜಯಶೀಲಾ ಪೈಯವರು ಅತಿಥಿಗಳಿಗೆ ಪುಷ್ಪ ನೀಡಿ ಗೌರವಿಸಿದರು. ಕಾಲೇಜಿನ‌ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಯವರು ಕಾರ್ಯಕ್ರಮ ನಿರ್ವಹಿಸಿದರು.