ಕುಂದಾಪುರ ಕಥೊಲಿಕ್ ಸಭಾ ಘಟಕದಿಂದ ವನಮಹೋತ್ಸವ

JANANUDI.COM NETWORK

ಕುಂದಾಪುರ,ಜು.4: ಕುಂದಾಪುರ ಕಥೊಲಿಕ್ ಸಭಾ ಘಟಕದಿಂದ ಭಾನುವಾರ ಜು. 3 ರಂದು ಇಗರ್ಜಿಯ ಆವರಣದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಕುಂದಾಪುರ ಕಥೊಲಿಕ್ ಸಭಾ ಘಟಕದ ಅಧ್ಯಾತ್ಮಿಕ ನಿರ್ದೇಶಕರು, ಕುಂದಾಪುರ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ, ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ಹಾ ಚರ್ಚಿನ ಆವರಣದ ಒಳಗಡೆ ಗೀಡಗಳನ್ನು ನೆಟ್ಟು ವನಮಹೋತ್ಸವವನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಕಥೊಲಿಕ್ ಸಭಾ ಘಟಕದ ಅಧ್ಯಕ್ಷೆ ಶೈಲಾ ಡಿಆಲ್ಮೇಡಾ ವಹಿಸಿದ್ದು. ಕಾರ್ಯದರ್ಶಿ ಎಲ್ಡ್ರಿನ್ ಡಿಸೋಜಾ, ಕಾರ್ಯಕ್ರಮದ ಸಂಚಾಲಕ ವಾಲ್ಟರ್ ಡಿಸೋಜಾ ಮತ್ತು ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.