ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ      ಸಂಪಾದಕರು : ಬರ್ನಾಡ್ ಡಿ’ಕೋಸ್ತಾ

ಕೋಲಾರ:- ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪುರಸ್ಕರಿಸಲು ನಿರ್ಧರಿಸಿದ್ದು, ಅರ್ಜಿ ಸಲ್ಲಿಸಲು ಜಿಲ್ಲಾ ಹಾಗೂ ತಾಲ್ಲೂಕು ನೌಕರರ ಸಂಘಗಳ ಅಧ್ಯಕ್ಷರ ದೃಢೀಕರಣ ಪತ್ರ ಕಡ್ಡಾಯವಾಗಿರುವುದರಿಂದ ನೌಕರರು ಸಂಘದ ಪದಾಧಿಕಾರಿಗಳನ್ನು ಸಂಪರ್ಕಿಸಲು ಸಂಘದ ಜಿಲ್ಲಾಧ್ಯಕ್ಷ ಸುರೇಶ್‍ಬಾಬು ಮನವಿ ಮಾಡಿದ್ದಾರೆ.
ನೌಕರರು ತಮ್ಮ ಪ್ರತಿಭಾವಂತ ಮಕ್ಕಳ ಅರ್ಜಿಗಳನ್ನು ಸಲ್ಲಿಸುವ ಮುನ್ನಾ ಅರ್ಜಿಗಳನ್ನು ನೌಕರರ ಸಂಘದ ಕಚೇರಿಯಲ್ಲಿ ಸಲ್ಲಿಸಿ, ದೃಢೀಕರಣ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಈ ಕುರಿತು ಜಿಲ್ಲೆಯ ಸರ್ಕಾರಿ ನೌಕರರಿಗೆ ಮನವಿ ಮಾಡಿರುವ ಅವರು, ಪ್ರತಿಭಾ ಪುರಸ್ಕಾರ ಅರ್ಜಿಗಳನ್ನು ಈಗಾಗಲೇ ಕೇಂದ್ರ ಸಂಘ ಬಿಡುಗಡೆ ಮಾಡಿದ್ದು, ನೌಕರರ ಅರ್ಹ ಪ್ರತಿಭಾನ್ವಿತ ಮಕ್ಕಳು ಅರ್ಜಿ ಸಲ್ಲಿಸಲು ಕೋರಿದ್ದಾರೆ.
ವಿದ್ಯಾರ್ಥಿಯ ಪೋಷಕರು ನಿಗಮ, ಮಂಡಳಿ,ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ, ಅನುದಾನಿತ ವಿದ್ಯಾಸಂಸ್ಥೆಯ ನೌಕರರಲ್ಲವೆಂಬುದನ್ನು ಖಚಿತಪಡಿಸಿಕೊಳ್ಳಲು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ನೌಕರರ ಸಂಘಗಳ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರುಗಳಿಗೆ ಸೂಚಿಸಿದ್ದಾರೆ.
ಜಿಲ್ಲಾ ಹಾಗೂ ತಾಲ್ಲೂಕು ನೌಕರರ ಸಂಘಗಳ ಅಧ್ಯಕ್ಷರ ದೃಢೀಕರಣ ಪತ್ರವಿಲ್ಲದ ಆನ್‍ಲೈನ್ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸ್ವಷ್ಟಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದೃಢೀಕರಣಕ್ಕಾಗಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಚೌಡಪ್ಪ-ದೂರವಾಣಿ ಸಂಖ್ಯೆ-9449272408, ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ-ದೂ.9448211802 ಅಥವಾ ಸಂಘದ ಕಚೇರಿಯ ನಾರಾಯಣಸ್ವಾಮಿ-ದೂ.9945353615 ಅವರನ್ನು ಸಂಪರ್ಕಿಸಲು ಸುರೇಶ್‍ಬಾಬು ಕೋರಿದ್ದಾರೆ.