ದೇಶಾದ್ಯಂತ ಹವಾಮಾನ ವೈಪರಿತ್ಯದಿಂದ ಮಹಾ ಮಳೆ:ರಾಜ್ಯದಲ್ಲಿ ನಿಲ್ಲದ ಮಳೆ, ಕೆಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ!

JANANUDI NEWS NETWORK               (EDITOR : BERNARD D’COSTA)

ದೇಶಾದ್ಯಂತ ಉಂಟಾಗಿರುವ ಹವಾಮಾನ ವೈಪರಿತ್ಯಗಳು ಸದ್ಯ ಕೊನೆಗೊಳ್ಳುವ ಲಕ್ಷಣಗಳಿಲ್ಲ. ಇವುಗಳು ಜುಲೈ 19ರವರೆಗೂ ಮುಂದುವರಿಯುವ.ಸಾಧ್ಯತೆ ಇದೆ ಎಂದು ತಿಳಿದು ಬಂದಿದ್ದು, ಈ ಕಾರಣಗಳಿಂದ ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಒಡಿಶಾ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್‌, ಕೇರಳ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ ಭಾರಿ ಮಳೆಯಾಗುವ. ಮುನ್ಸೂಚನೆ ಇದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಹಾರಾಷ್ಟ್ರ ತತ್ತರಿಸಿದ್ದು, ಮುಂದಿನ 24 ಗಂಟೆಗಳ ಕಾಲ ಮುಂಬೈಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿನ ಅಧಿಕಾರಿ, ವಿಜ್ಞಾನಿ ಪ್ರಸಾದ್‌ ಈ ಕುರಿತು ಮಾಹಿತಿ ನೀಡಿದ್ದಾರೆ. ದೇಶದ ಕಲವು. ಭಾಗಗಳಲ್ಲಿನ ಹವಾಮಾನದಲ್ಲಿನ ಬದಲಾವಣೆ ಜುಲೈ 9 ರವರೆಗೆ ಅಂದರೆ 11 ದಿನಗಳ ಕಾಲ ಹೀಗೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಜಾರ್ಖಂಡ್‌ ಮತ್ತು ಅಕ್ಕಪಕ್ಕದ ರಾಜ್ಯಗಳಲ್ಲಿ ಚಂಡಮಾರುತ ವಿಸ್ತರಿಸಲಿದೆಯೆಂದು ಎಂದು ಐಎಂಡಿ ಎಚ್ಚರಿಸಿದೆ.

ರಾಜ್ಯದ ಪರಿಸ್ಥಿತಿ

ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಕಡೆ ಭೂಕುಸಿತ ಸಂಭವಿಸಿದೆ. ರಾಜ್ಯದ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಕಬಿನಿ ಜಲಾಶಯ ತುಂಬುವ ಹಂತದಲ್ಲಿದ್ದು ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ನೀರು ತುಂಬಲಿದ್ದು, ಅದನ್ನು ಹೊರಬಿಡಲಾಗುತ್ತದೆ ಎಂದು ಹೇಳಲಾಗಿದೆ.

ಹವಾಮಾನ ಇಲಾಖೆ ರಾಜ್ಯದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಜುಲೈ 19ರ ತನಕ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ರಾಜ್ಯದ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಕೂಡಾ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಕೆಲ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ನೀಡಿದೆ.ಹಾಗೇ ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ

     ಕರಾವಳಿ ಭಾಗದಲಿ ಮುಂದಿನ ಎರಡು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವುದರಿಂದ ತುಂಗಾ, ಶರಾವತಿ, ವರದಾ ಮೊದಲಾದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಪ್ರವಾಹ ಭೀತಿ ಎದುರಾಗುವ ಸಾಧ್ಯತೆ ಇದ್ದು ನದಿಗಳಲ್ಲಿ ಇಳಿಯಬಾರದೆಂದು ಸೂಚಿಸಲಾಗಿದೆ.