ವರದಿ:ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ (ಸಂಪಾದಕರು: ಬರ್ನಾಡ್ ಡಿ’ಕೋಸ್ತಾ)
ಶ್ರೀನಿವಾಸಪುರ: ತಾಲ್ಲೂಕಿನ ಶ್ರೀನಿವಾಸಪುರ, ತಾಡಿಗೋಳ್, ಲಕ್ಷ್ಮೀಪುರ, ಸೋಮಯಾಜಲಹಳ್ಳಿ, ಗೌನಿಪಲ್ಲಿ, ಅಡ್ಡಗಲ್ ಹಾಗೂ ರಾಯಲ್ಪಾಡ್ 66/11ಕೆವಿ ವಿದ್ಯುತ್ ಉಪ ಕೇಂದ್ರಗಳಲ್ಲಿ, ಜು.13 ರಂದು ಕೆಪಿಟಿಸಿಎಲ್ ವತಿಯಿಂದ ತ್ರೈಮಾಸಿಕ ನಿರ್ವಹಣಾ ಕೆಲಸಗಳನ್ನು ಹಮ್ಮಿಕೊಳ್ಳಲಾಗಿದೆ. ಅದರ ಪರಿಣಾಮವಾಗಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಚಿಂತಾಮಣಿ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಮೇಲ್ಕಂಡ ಎಲ್ಲಾ ಉಪ ಕೇಂದ್ರಗಳ 11 ಕೆವಿ ಮಾರ್ಗಗಳಿಗೆ ವಿದ್ಯುತ್ ಸರಗರಾಜಿನಲ್ಲಿ ಅಡಚಣೆಯಾಗಲಿದೆ ಎಂದು ಸಂಸ್ಥೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಮತೀರ್ಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.