ಸೈಂಟ್ ಮೇರಿಸ್ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಕುಂದಾಪುರ: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆದುಬಂದರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಕುಂದಾಪುರದ ಪ್ರಸಿದ್ಧ ವಕೀಲರಾದ ಶ್ರೀ ರವಿ ಶೆಟ್ಟಿ ಮಚ್ಚಟ್ಟುರವರು ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಹೇಳಿದರು.

ಸೈಂಟ್ ಮೇರಿಸ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ವಿದ್ಯಾರ್ಥಿ ಸಂಸತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಕುಂದಾಪುರದ ಪ್ರಸಿದ್ಧ ವಕೀಲರಾದ ಶ್ರೀ ರವಿ ಶೆಟ್ಟಿ ಮಚ್ಚಟ್ಟುರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ,ಅದ್ದೂರಿಯಾಗಿ ವಿದ್ಯಾರ್ಥಿ ಸಂಸತ್ತು ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಅರಿವು ಪ್ರಾಥಮಿಕ ಶಾಲೆಯಿಂದಲೇ ಆರಂಭವಾಗಬೇಕು,ಅಲ್ಲದೆ ಜವಾಬ್ದಾರಿಯುತ ಜೀವನ ವಿದ್ಯಾರ್ಥಿಗಳದ್ದಾಗಿರಬೇಕು” ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.


ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಸೈಂಟ್ ಮೇರಿಸ್ ವಿದ್ಯಾಸಂಸ್ಥೆಗಳ ಜಂಟಿ ಕಾರ್ಯದರ್ಶಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳಾಗಿರುವ ಅತಿ ವಂದನೀಯ ಫಾದರ್ ಸ್ಟ್ಯಾನಿ ತಾವ್ರೊ ವಹಿಸಿದ್ದು ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಅಭಿನಂದಿಸಿದರು.


ವಿದ್ಯಾರ್ಥಿ ನಾಯಕನಾಗಿ ಆಯ್ಕೆಯಾಗಿದ್ದ ಮಿ.ಪ್ರಿತೇಶ್ ಕರ್ವಾಲ್ಹೊರವರು ತನ್ನನ್ನು ಮತನೀಡಿ ಆರಿಸಿದ್ದಕ್ಕೆ ಸಂತೋಷ ಹಾಗೂ ವಂದನೆ ಸಲ್ಲಿಸಿದರು. ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲೆ ರೇಶ್ಮಾ ಫೆರ್ನಾಂಡೀಸ್, ಉಪ ಪ್ರಾಂಶುಪಾಲೆ ಮಂಜುಳಾ ನಾಯರ್, ಹಾಗೂ ವಿದ್ಯಾರ್ಥಿ ಸಂಸತ್ತಿನ ವಿವಿದ ವಿಭಾಗದಲ್ಲಿ ಮಂತ್ರಿಗಳಾಗಿ ಆರಿಸಿ ಬಂದ ವಿದ್ಯಾರ್ಥಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕಿ ಉಪನ್ಯಾಸಕಿ ಉಷಾ ಸ್ವಾಗತಿಸಿದರು. ವಿದ್ಯಾರ್ಥಿ ಸಂಸತ್ತಿನ ಕಾರ್ಯದರ್ಶಿ ಪ್ರೀತಿಕಾ, ಹಾಗೂ ಉಪ ಕಾರ್ಯದರ್ಶಿ ವೆನಿಷಾ ಡಿಸೋಜಾ ವಂದಿಸಿದರು. ಪ್ರಥಮ ಪಿ.ಯು .ಸಿ ಯ ವಿದ್ಯಾರ್ಥಿನಿ ಅವಿಟಾ ಕಾರ್ಯಕ್ರಮ ನಿರೂಪಿಸಿದರು.