ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬೂಸ್ಟರ್ ಡೋಸ್ ಲಸಿಕಾ ಅಭಿಯಾನ


ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್‍ಸಿಸಿ, ಎನ್‍ಎಸ್‍ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಬೂಸ್ಟರ್ ಡೋಸು ಲಸಿಕಾ ಅಭಿಯಾನವನ್ನು ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ, ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಜುಲೈ 22 ರಂದು ಆಯೋಜಿಸಲಾಯಿತು.

ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗೆ ಬೂಸ್ಟರ್ ಡೋಸ್ ಕೋವಿಡ್ -19 ಲಸಿಕಾಕರಣ ನಡೆಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾಲೇಜಿನ 18 ವರ್ಷಕ್ಕಿಂತ ಮೇಲ್ಪಟ್ಟ ಎರಡು ಡೋಸ್ ಪಡೆದ ಅರ್ಹ ಫಲಾನುಭವಿಗಳಿಗೆ ಲಸಿಕೆಗಳ ಲಭ್ಯತೆಗೆ ಅನುಸಾರವಾಗಿ ಕಾಲೇಜು ಆವರಣದಲ್ಲಿಯೇ ಲಸಿಕಾಕರಣ ಅಭಿಯಾನ ಆಯೋಜಿಸಲಾಯಿತು, ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಸುಬ್ರಮಣ್ಯ ರವರು ಜಿಲ್ಲಾಡಳಿತದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದ್ದು ಕಾಲೇಜುಗಳ ಮೂಲಕ ಲಸಿಕೆ ನೀಡಲಾಗುತ್ತಿದೆ,ಲಸಿಕೆ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂಬ ಮಾಹಿತಿಯನ್ನು ನೀಡಿದರು.     

ಈ ಕಾರ್ಯಕ್ರಮದಲ್ಲಿ ಬೋಧಕ,ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು.
ಈ ಅಭಿಯಾನಕ್ಕೆ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ಶಶಿ , ಆಶಾ ಕಾರ್ಯಕರ್ತರಾದ ಸವಿತಾ,ರೆಹೆಮತ್‍ವರು ಸಹಕಾರವನ್ನು ನೀಡಿದರು
.