ಕಲ್ಮಾಡಿಯ ವೆಲಂಕಣಿ ಮಾತಾ ಧರ್ಮಕೇಂದ್ರವನ್ನು ಆಗಸ್ಟ್ 15 ರಂದು ಅಧಿಕೃತವಾಗಿ ಪುಣ್ಯಕ್ಷೇತ್ರವೆಂದು ಘೋಷಣೆ

ಉಡುಪಿ, ಅ.೩: ಕಲ್ಮಾಡಿಯ ವೆಲಂಕಣಿ ಮಾತಾ ಧರ್ಮಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತವಾಗಿ ಪುಣ್ಯಕ್ಷೇತ್ರವೆಂದು ಆಗಸ್ಟ್ 15 ರಂದು ಘೋಷಣೆ ಮಾಡಲಾಗುವುದು ಎಂದು ಚರ್ಚಿನ ಧರ್ಮಗುರುಗಳಾದ ವಂ. ಬ್ಯಾಪ್ಟಿಸ್ಟ್ ಮಿನೇಜಸ್ ಹೇಳಿದರು.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಚರ್ಚಿನ 50ನೇ ವರ್ಷದ ಆಚರಣೆಯನ್ನು ಕೂಡ ನಡೆಸಲಾಗುವುದು. ಕಲ್ಮಾಡಿಯಲ್ಲಿ ವೆಲಂಕಣಿ ಮಾತೆಯ ಪ್ರತಿಮೆಯನ್ನು ತಮಿಳುನಾಡಿನ ವೆಲಂಕಣಿ ಪುಣ್ಯಕ್ಷೇತ್ರದಿಂದ ತರಲಾಯಿತು. 1988ರ ಅಗಸ್ಟ್ 15 ರಂದು ಕಲ್ಮಾಡಿಯಲ್ಲಿ ಅಂದಿನ ಮಂಗಳೂರಿನ ಬಿಷಪ್ ಅತೀ ವಂ| ಡಾ| ಬಾಸಿಲ್ ಡಿಸೋಜಾ ಅವರು ವೆಲಂಕಣಿ ಮಾತೆಯ ಪ್ರತಿಮೆಯನ್ನು ಪ್ರತಿಷ್ಠಾಪಿಸಿದರು.

ಕಲ್ಮಾಡಿಯಲ್ಲಿರುವ ವೆಲಂಕಣಿ ಮಾತೆಯ ಕೇಂದ್ರವನ್ನು 15 ಅಗಸ್ಟ್ 2022 ರಂದು ಉಡುಪಿ ಧರ್ಮ ಪ್ರಾಂತ್ಯದ ಪುಣ್ಯಕ್ಷೇತ್ರವೆಂದು ಅಧಿಕೃತವಾಗಿ ಘೋಷಿಸಲಾಗುವುದು. ಈ ಧಾರ್ಮಿಕ ಕಾರ್ಯಕ್ರಮವು ಬೆಳಿಗ್ಗೆ 10 ಗಂಟೆಗೆ ಕೃತಜ್ಞಾತಾ ಪೂರ್ವಕವಾಗಿ ದಿವ್ಯ ಬಲಿಪೂಜೆಯ ಮುಖಾಂತರ ನಡೆಯಲಿರುವುದು.

    ಈ ವೀಶೆಷ ದಿವ್ಯ ಬಲಿಪೂಜೆಯಲ್ಲಿ ಉಡುಪಿ ಧರ್ಮಾಧ್ಯಕ್ಷರಾಫ ಅ| ವಂ| ಡಾ| ಜೆರಾಲ್ಡ್ ಐಸಾಕ್ ಲೋಬೊ, ಮಂಗಳೂರು ಧರ್ಮಾಧ್ಯಕ್ಷ ಅ| ವಂ| ಡಾ| ಪೀಟರ್ ಪೌಲ್ ಸಲ್ಡಾನಾ, ಮಂಗಳೂರಿನ ನಿವೃತ ಬಿಷಪ್ ಅ| ವಂ| ಡಾ| ಅಲೋಶಿಯಸ್ ಪಾವ್ಲ್ ಡಿಸೋಜಾ, ಶಿವಮೊಗ್ಗ ಧರ್ಮಾಧ್ಯಕ್ಷ ಅ| ವಂ| ಡಾ| ಫ್ರಾನ್ಸಿಸ್ ಸೆರಾವೊ, ಬಳ್ಳಾರಿ ಧರ್ಮಾಧ್ಯಕ್ಷ ಅ| ವಂ| ಡಾ| ಹೆನ್ರಿ ಡಿಸೋಜಾ, ಬೆಳ್ತಂಗಡಿ ಧರ್ಮಾಧ್ಯಕ್ಷ ಅ| ವಂ| ಡಾ|. ಲಾರೆನ್ಸ್ ಮುಕ್ಕುಯಿ, ಪುತ್ತೂರಿನ ಧರ್ಮಾಧ್ಯಕ್ಷ ಅ| ವಂ| ಡಾ| ಡಾ. ಗೀವರ್ಗಿಸ್ ಮಕಾರಿಯೋಸ್ ಕಲಾಯಿಲ್ ಭಾಗವಹಿಸಲಿದ್ದಾರೆ.

 ಸಭಾಕಾರ್ಯಕ್ರಮದಲ್ಲಿ ಎಲ್ಲಾ ಧರ್ಮಾಧ್ಯಕ್ಷರು, ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅ|ವಂ| ಮೊನ್ಸಿಂಜ್ಞೊರ್ ಬ್ಯಾಪ್ಟಿಸ್ಟ್ ಮಿನೇಜಸ್, ಉಡುಪಿ ಧರ್ಮಪ್ರಾಂತ್ಯದ ಚಾನ್ಸ್ ಲರ್ ಅ| ವಂ| ಸ್ಟ್ಯಾನಿ ಬಿ ಲೋಬೊ, ಉಡುಪಿ ವಲಯ ಧರ್ಮಗುರು ವಂ ಚಾರ್ಲ್ಸ್ ಮಿನೇಜಸ್ ಮತ್ತು ಹಲವಾರು ವಲಯದ ಪ್ರಧಾನ ಧರ್ಮಗುರುಗಳು, ಇತರ ಹಲವಾರು ಧರ್ಮಗುರುಗಳು ಉಪಸ್ಥಿತರಿರುವರು.