ಸುಪ್ರೀಂ ಕೋರ್ಟ್ ಬಗ್ಗೆ ನನಗೆ ಯಾವುದೇ ಭರವಸೆ ಉಳಿದಿಲ್ಲ – 50 ವರ್ಷ ಸುದೀರ್ಘ ‌ಕಾಲ ವಕೀಲ‌ ವೃತ್ತಿ ನಡೆಸಿದ: ಖ್ಯಾತ ವಕೀಲ ಕಪಿಲ್ ಸಿಬಲ್

ನವದೆಹಲಿ: ಸುಪ್ರೀಂ ಕೋರ್ಟ್ ಕುರಿತು ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್ ಅಸಮಾಧಾನ ವ್ಯಕ್ತಪಡಿಸಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ನೀಡಿದ ಇತ್ತೀಚಿನ ಕೆಲವು ತೀರ್ಪುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್​ ಬಗೆಗಿನ ಭರವಸೆ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನಿಂದ ನಿಮಗೆ ಸೂಕ್ತ ಪರಿಹಾರ ಸಿಗುತ್ತದೆ ಎಂದು ನೀವು ಭಾವಿಸಿದರೆ ಅದು ನಿಮ್ಮ ತಪ್ಪು ಕಲ್ಪನೆ. ಸುಪ್ರೀಂ ಕೋರ್ಟ್‌ನಲ್ಲಿ 50 ವರ್ಷಗಳ ಪಕೀಲಿ ವ್ರತ್ತಿ ಪೂರ್ಣಗೊಳಿಸಿದ ನಂತರ ನಾನು ಈ ಮಾತನ್ನು ಹೇಳುತ್ತಿದ್ದೇನೆ’ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದರೂ ಅದು ನೆಲದ ವಾಸ್ತವತೆಯನ್ನು ಬದಲಾಯಿಸುವುದಿಲ್ಲ. ಈ ವರ್ಷ ನಾನು ಸುಪ್ರೀಂ ಕೋರ್ಟ್‌ನಲ್ಲಿ 50 ವರ್ಷಗಳ ಅಭ್ಯಾಸವನ್ನು ಪೂರ್ಣಗೊಳಿಸಿದ ನಂತರ ನಾನು ಇದನ್ನು ಹೇಳುತ್ತೆನೆ’ ಎಂದು ಹೇಳಿದ್ದಾರೆ.

ನೀವು ಸುಪ್ರೀಂ ಕೋರ್ಟ್ ನೀಡಿದ ಪ್ರಗತಿಪರ ತೀರ್ಪುಗಳ ಬಗ್ಗೆ ಮಾತನಾಡುತ್ತೀರಿ. ಆದರೆ ನೆಲದ ಮಟ್ಟದಲ್ಲಿ ಏನಾಗುತ್ತದೆ ಎಂಬುದರಲ್ಲಿ ಭಾರೀ ವ್ಯತ್ಯಾಸವಿದೆ. ಸುಪ್ರೀಂ ಕೋರ್ಟ್ ಗೌಪ್ಯತೆಯ ಬಗ್ಗೆ ತೀರ್ಪು ನೀಡಿತು. ಆದರೆ, ಇಡಿ ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ. ಆವಾಗ ನಿಮ್ಮ ಗೌಪ್ಯತೆ ಏನಾಯಿತು? ಎಂದು ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಲವರಿಗೆ ವಿಶೇಷ ತನಿಖಾ ತಂಡ (SIT) ನೀಡಿದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಹೆಂಡತಿ ಜಾಕಿಯಾ ಜಫ್ರಿ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ್ದಕ್ಕಾಗಿ ಕಪಿಲ್ ಸಿಬಲ್ ಸುಪ್ರೀಂ ಕೋರ್ಟನ್ನು ಟೀಕಿಸಿದ್ದಾರೆ.