ಸಂತ ಮೇರಿ ಕಾಲೇಜು, ಶಿರ್ವ “ಜಾವ ಮೇಡ್ ಈಜಿ” – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆ

ಶಿವ೯: ಇಲ್ಲಿನ ಶಿರ್ವ ಸಂತಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರಿನ ಯುನೈಟೆಡ್ ಏಜೆನ್ಸಿ ಇದರ ಸಂಪಾದಕರಾದ ಶ್ರೀಯುತ ಕೃಷ್ಣನ್ ಅಯ್ಯರ್ ಅವರು ಉಪನ್ಯಾಸಕ ಕೆ.ಪ್ರವೀಣ್ ಕುಮಾರ್‍ರವರ “ಜಾವ ಮೇಡ್ ಈಜಿ” – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆಗೊಳಿಸಿದರು.
ಪರೀಕ್ಷಾ ತಯಾರಿಕೆಯಲ್ಲಿ ಇಂದಿನ ವಿದ್ಯಾರ್ಥಿಗಳಿಗೆ ಹೊಸ ಹೊಸ ಸವಾಲುಗಳು ಎದುರಾಗುವುದು ಸಹಜ. ಈ ನಿಟ್ಟಿನಲ್ಲಿ ಪರೀಕ್ಷಾ ಪೂವ೯ ತಯಾರಿಯಾಗಿ ಇಂತಹ ಪ್ರಶ್ನೋತ್ತರ ಮಾಲಿಕೆ ಪುಸ್ತಕಗಳು ವಿದ್ಯಾರ್ಥಿಯ ಪರೀಕ್ಷಾ ಒತ್ತಡವನ್ನು ಕಡಿಮೆಗೊಳಿಸಲು ಸಹಕಾರಿಯೆಂದು ಪ್ರಾಂಶುಪಾಲರಾದ ಡಾ.ಹೆರಾಲ್ಡ್ ಐವನ್ ಮೊನಿಸ್ ರವರು ಪುಸ್ತಕದ ಬಗ್ಗೆ ಲೇಖಕರನ್ನು ಪ್ರಶಂಸೆಯ ಮಾತುಗಳೊಂದಿಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಬಿ.ಸಿ.ಎ. ವಿಭಾಗದ ಮುಖ್ಯಸ್ಥ ಹಾಗೂ ಮಾಹಿತಿ ತಂತ್ರಜ್ಞಾನದ ಸಂಯೋಜಕರಾದ ಲೆಫ್ಟಿನೆಂಟ್ ಕೆ.ಪವೀಣ್ ಕುಮಾರ್ ರವರು ಇಂತಹ ಪುಸ್ತಕಗಳನ್ನು ತಯಾರು ಮಾಡಲು ನನ್ನ ಗಣಕ ವಿಜ್ಞಾನದ ವಿದ್ಯಾರ್ಥಿಗಳೆ ಪ್ರೇರಕ ಶಕ್ತಿ, ಅವರಿಗೆ ನಾನು ಅಭಾರಿಯಾಗಿದ್ದೇನೆ. ಪುಸ್ತಕದ ಬಗ್ಗೆ ಮಾತನಾಡುತ್ತಾ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ವಯ ದ್ವಿತೀಯ ಬಿ.ಸಿ.ಎ. ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷಾ ದೃಷ್ಟಿ ಯಿಂದ ಈ ಪುಸ್ತಕ ಹೆಚ್ವು ಸಹಕಾರಿ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಯುನೈಟೆಡ್ ಏಜೆನ್ಸಿನ ಪ್ರಸನ್ನ ಅಯ್ಯರ್, ಇನ್ಫೋಸಿಸ್ ಮತ್ತು ವಿಪ್ರೋ ಕಂಪನಿನ ಜೂನಿಯರ್ ಅಸೋಸಿಯೇಟ್ಸ್ ಶ್ರೀ ರಾಮ್ದಾಸ್ ಭಟ್ , ಪೂಜಾರಿ ಪ್ರತೀಕ್ ಪ್ರಭಾಕರ್, ಉಪನ್ಯಾಸಕರುಗಳಾದ ಶ್ರೀ ಪ್ರಕಾಶ್ ,ಶ್ರೀಮತಿ ದಿವ್ಯಾ ಶ್ರೀ, ಕು. ಪ್ರಣಿತ, ಬಿಸಿಎ ವಿಭಾಗದ ಎಲ್ಲಾ ಅಧ್ಯಾಪಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ವಿಧಾತ್ ಶೆಟ್ಟಿ , ಅನುಕ್ ನಾಯಕ್ ಸಹಕರಿಸಿದ್ದರು.ಕು. ದೀಪಿಕಾ ಮತ್ತು ಬಳಗ ಪಾರ್ಥಿಸಿದರು. ಕು.ವರ್ಷ ಬಂಗೇರ ಸ್ವಾಗತಿಸಿ, ಕು.ಶಮಿತಾ ಶೆಟ್ಟಿ ವಂದಿಸಿದರು.ಕು. ಸೃಷ್ಟಿ ಕಾರ್ಯಕ್ರಮ ನಿರೂಪಿಸಿದರು.