ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸದುಪಯೋಗ ಪಡಿಸಿಕೊಳ್ಳಬೇಕು:ತಹಶೀಲ್ದಾರ್ ಶಿರಿನ್ ತಾಜ್

ಶ್ರೀನಿವಾಸಪುರ: ಜನರು ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸದುಪಯೋಗ ಪಡಿಸಿಕೊಳ್ಳಬೇಕುಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ತಾಲ್ಲೂಕಿನ ಪಾತನೆಲವಂಕಿ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಸಾಧ್ಯವಾಗುತ್ತದೆ. ಇನ್ನು ಕೆಲವು ಸಮಸ್ಯೆಗಳನ್ನು ಕಾಲ ಮಿತಿಯಲ್ಲಿ ಪರಿಹರಿಸಲಾಗುವುದು. ಗ್ರಾಮದ ಸ್ಮಶಾನ ಒತ್ತುವರಿ ತೆರವುಗೊಳಿಸಿ, ಶಾಂತಿ ಧಾಮ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು. ಕೆರೆಯಲ್ಲಿ ನೀರು ಮುಗಿದ ಬಳಿಕ ಕೆರೆ ಒತ್ತುವರಿ ತೆರವುಗೊಳಿಸಿ ಕೆರೆ ಅಭಿವೃದ್ಧಿ ಕೈಗೊಳ್ಳಲಾಗುವುದು. ಪಹಣಿ ಜೋಡಣೆಗೆ ಕ್ರಮ ಕೈಗೊಳ್ಳಾಗುವುದು. ಅಂಗನವಾಡಿ ಕಟ್ಟಡ ನಿರ್ಮಿಸಲಾಗುವುದು ಎಂದು ಹೇಳಿದರು.
ವಿವಿಧ ಇಲಾಖೆಗಳ ಮುಖ್ಯಸ್ಥರು ಮಾತನಾಡಿ, ತಮ್ಮ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ 10 ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ವಿತರಿಸಲಾಯಿತು.
ವಿವಿಧ ಇಲಾಖೆಗಳ ಅಧಿಕಾರಿಗಳಾದ ಮಂಜುನಾಥ್, ಗೌಸ್‍ಸಾಬ್, ಎಂ.ನಾರಾಯಣಸ್ವಾಮಿ, ಡಾ.ವಿಶ್ವನಾಥ್, ಡಾ.ಕವಿತ, ಡಾ. ಮಂಜುನಾಥ್, ಎಂ.ಶ್ರೀನಿವಾಸನ್, ಕೃಷ್ಣಪ್ಪ, ಮಂಜುನಾಥ್, ಅಬೀಬ್, ಮೆಘಾ ನಾಯಕ್, ವಿರೂಪಾಕ್ಷಪ್ಪ, ಬಾಬು, ನಟರಾಜ್, ಭಾವನಾ, ಶರಣಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಲಮೇಲಮ್ಮ, ಸದಸ್ಯರಾದ ರಘುನಾಥರೆಡ್ಡಿ, ಸಿ.ಎಂ.ರಮೇಶ್, ಬಾಬೂರೆಡ್ಡಿ ಇದ್ದರು.