ಗಡಿ ಪ್ರದೇಶದಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು :ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಗಡಿ ಪ್ರದೇಶದಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಚೈತನ್ಯ ಜನ ಜಾಗೃತಿ ವೇದಿಕೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಭಾಷೆಯೊಂದಿಗೆ ಬದುಕುವ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ಚೈತನ್ಯ ಜನ ಜಾಗೃತಿ ವೇದಿಕೆ ಸುಮಾರು 26 ಈ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದೆ. ಗಡಿ ಭಾಗದ ಜನರಲ್ಲಿ ಕನ್ನಡ ಪ್ರೇಮ ಉಂಟುಮಾಡಲು ಶ್ರಮಿಸುತ್ತಿದೆ. ಇಂಥ ಪ್ರಯತ್ನಗಳು ಎಲ್ಲ ಕನ್ನಡ ಪರ ಸಂಘಟನೆಗಳಿಂದಲೂ ನಡೆಯಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥರೆಡ್ಡಿ, ಪುರಸಭಾ ಸದಸ್ಯ ಬಿ.ವಿ.ರೆಡ್ಡಿ, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಜಿ.ಚಂದ್ರು. ಜಿಲ್ಲಾ ಘಟಕದ ಉಪಾಧ್ಯಕ್ಷ ಹೈದರ್ ಷರೀಫ್, ಮುಖಂಡರಾದ ಪೂಲ ಶಿವಾರೆಡ್ಡಿ, ವಿ.ಮುನಿಯಪ್ಪ, ಶ್ರೀನಿವಾಸರೆಡ್ಡಿ, ಗಾಯಿತ್ರಿ ಮುತ್ತಪ್ಪ, ರಸೂಲ್ ಖಾನ್, ಕಾರ್ ಬಾಬು, ಜಗನ್, ಸಾದಿಕ್ ಪಾಷ, ಸಂತೋಷ್, ಮಂಜು, ಜಗದೀಶ್, ಅಪ್ಪೂರು ರಾಜು, ರವಿ ಇದ್ದರು.