ಮಂಗಳೂರು ಯುವ ನ್ಯಾಯವಾದಿ ಮೇಲೆ ಪುಂಜಾಲಕಟ್ಟೆ ಪೊಲೀಸ್ ದೌರ್ಜನ್ಯ : ಬನ್ನಾಡಿ ಸೋಮನಾಥ್ ಹೆಗ್ಡೆ ಖಂಡನೆ.

ದಿನಾಂಕ 3.12.2022 ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೊಲೀಸರು ನಡೆಸಿದ ದೌರ್ಜನ್ಯವನ್ನು ಕುಂದಾಪುರ ವಕೀಲರ ಸಂಘದ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆ ತೀವ್ರವಾಗಿ ಖಂಡಿಸಿರುತ್ತಾರೆ.

ಈ ಬಗ್ಗೆ ಕುಂದಾಪುರ ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆ ಕರೆದು ಚರ್ಚಿಸಲಾಗಿದೆ.ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂದಕಾಜ್ಞೆ ಇದ್ದರೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲರ ಮೇಲೆ ಎಫ್ ಐ ಆರ್ ದಾಖಲಿಸಿ ರಾತೋರಾತ್ರಿ ವಕೀಲರ ಮನೆ ಪ್ರವೇಶ ಮಾಡಿ ವಕೀಲರನ್ನು ಮನೆಯಿಂದ ಎಳೆದುಕೊಂಡು ಹೋಗಿ ನಡೆಸಿದ ಪೊಲೀಸ್ ದೌರ್ಜನ್ಯವನ್ನು ತೀವ್ರವಾಗಿ ಸಭೆಯಲ್ಲಿ ಖಂಡಿಸಲಾಗಿದೆ.

ಮಾನ್ಯ ಬಂಟ್ವಾಳದ ನ್ಯಾಯಾಲಯ ಕೂಡ ಪೊಲೀಸರ ದೌರ್ಜನ್ಯವನ್ನು ತನಿಖೆ ಮಾಡಿ ವರದಿ ಕೊಡುವಂತೆ ಹಿರಿಯ ಪೊಲೀಸ್ ಅಧಿಕಾರಿಗೆ ಆದೇಶಿಸಿರುತ್ತದೆ. ಹಾಗಾಗಿ ನ್ಯಾಯಾಲಯದ ಆದೇಶದಂತೆ ಈ ಕೂಡಲೇ ತಪ್ಪಿತಸ್ತ ಪೋಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾಳೆ ಕುಂದಾಪುರ ವಕೀಲರ ಸಂಘದಲ್ಲಿ ಎಲ್ಲಾ ವಕೀಲರು ಸೇರಿ ತೀವ್ರ ಪ್ರತಿಭಟನೆ ಮಾಡಲು ನಿರ್ಣಯಿಸಲಾಗಿದೆ.

ಕುಂದಾಪುರ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್, ಉಪಾಧ್ಯಕ್ಷರಾದ ಶ್ರೀಮತಿ ಬೀನಾ ಜೊಸೆಫ್, ಜತೆ ಕಾರ್ಯದರ್ಶಿ ರಿತೇಶ್ ಬಿ ಹಾಗೂ ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಉಪಸ್ತಿತರಿದ್ದರು.