ಕುಂದಾಪುರ: ಇಬ್ಬರು ಅಂತಾರಾಜ್ಯ ಕಳ್ಳರ ಬಂದನ 16 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕುಂದಾಪುರ: ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಇದು ಕಳೆದ ಮೂರು ತಿಂಗಳ ಹಿಂದೆ ನಡೆದ ಪ್ರಕರಣವಾಗಿದೆ.

ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಮತ್ತು ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ (48) ಹಾಶಿಮ್ ನನ್ನು ಕೇರಳದ ಕಾಸರಗೋಡಿನಲ್ಲಿ ಹಾಗೂ ಇನ್ನೋರ್ವ ಆರೋಪಿ ಅಬೂಬಕ್ಕರ್ ಸಿದ್ದಿಕ್ ನನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ.

ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ವೃತ್ತನಿರೀಕ್ಷಕ ಗೋಪಿಕೃಷ್ಣ ಕೆ.ಆರ್. ಹೆಚ್ಚಿನ ತನಿಖೆ ನಡೆಸಿದ್ದು, ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ, ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ, ಕಳವು ಮಾಡಿದ ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ಜುವೆಲ್ಸರ್ಸ್ ಒಂದರಲ್ಲಿ ಮಾರಾಟ ಮಾಡಿರುವದಾಗಿ ಒಪ್ಪಿಕೊಂಡಿದ್ದಾರೆ . 300 ಗ್ರಾಂ ಚಿನ್ನ, 1 ಲಕ್ಷ ಮೌಲ್ಯದ 1481 ಗ್ರಾಂ ಬೆಳ್ಳಿ ಸಹಿತ ಒಟ್ಟು 15 ಲಕ್ಷ ಮೌಲ್ಯದ ಸೊತ್ತುಗಳನ್ನು ಮತ್ತು ನಗದು 1 ಲಕ್ಷ  ವಶಕ್ಕೆ ಪಡೆಯಲಾಗಿದ್ದು ಆಭರಣಗಳನ್ನು ಮಂಜೇಶ್ವರ ಮಳಿಗೆಯಲ್ಲಿ ಆರೋಪಿಗಳನ್ನು ಮಾರಾಟ ಮಾಡಿದ್ದನ್ನು ಜಪ್ತಿ ಮಾಡಲಾಗಿದೆ. ರಾಜ್ಯದ ಹಲವಾರು ಕಡೆ ಕಳ್ಳತನ ಮಾಡಿದ ಈ ಅಂತರ್ ರಾಜ್ಯ ಕಳ್ಳರನ್ನು ಜ.6 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಎಸಿ ಅಕ್ಷಯ್‌ ಎಂ. ಎಚ್‌., ಎಎಸ್ಪಿ ಎಸ್‌. ಟಿ. ಸಿದ್ದಲಿಂಗಪ್ಪ ಅವರ ನಿರ್ದೇಶನದಂತೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್‌. “ನೇತೃತ್ವದಲ್ಲಿ ಕುಂದಾಪುರ ಎಸ್‌ಐಗಳಾದ ಸದಾಶಿವ ಗವರೋಜಿ, ಪ್ರಸಾದ್‌ ಕುಮಾರ್‌ ಕೆ. ,ಎಎಸ್‌ಐ ಸುಧಾಕರ, ಸಿಬಂದಿಯಾದ ಸಂತೋಷ ಕುಮಾರ್‌ ಕೆ.ಯು, ಸಂತೋಷ ಕುಮಾರ್‌, ರಾಮ ಪೂಜಾರಿ ಹಾಗೂ ಜಿಲ್ಲಾ ಪೊಲೀಸ್‌ ಕಚೇರಿಯ ತಾಂತ್ರಿಕ ವಿಭಾಗದ ದಿನೇಶ್‌ ಅವರನ್ನೊಳಗೊಂಡ ತಂಡವು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಹಕರಿಸಿತ್ತು.