ವಿದ್ಯಾರ್ಥಿಗಳು ಕೆಟ್ಟ ಹವ್ಯಾಸಗಳಿಗೆ ಜೀವನವನ್ನು ಬಲಿಕೊಡದೆ ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗುಂಡು ಉತ್ತಮ ಸಾಧನೆಯಿಂದ ದೇಶದ ಘನತೆ ಗೌರವ ಕಾಪಾಡಿ: ಬಿಆರ್‍ಸಿ ಕೆ.ಸಿ. ವಸಂತ

ಶ್ರೀನಿವಾಸಪುರ 3 : ದೇಶದ ಬೆನ್ನೆಲುಬಾದ ವಿದ್ಯಾರ್ಥಿಗಳು ಕೆಟ್ಟಹವ್ಯಾಸಗಳಿಗೆ ತಮ್ಮ ಅಮೂಲ್ಯವಾದ ಜೀವನವನ್ನು ಬಲಿಕೊಡದೆ ಆರೋಗ್ಯವಂತ ಜೀವನವನ್ನು ಪಠ್ಯ ಹಾಗು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗುಂಡು ಉತ್ತಮ ಸಾಧನೆಯ ಮೂಲಕ ದೇಶದ ಘನತೆ ಗೌರವವನ್ನು ಕಾಪಾಡುವಂತೆ ಬಿಆರ್‍ಸಿ ಕೆ.ಸಿ. ವಸಂತ ಕರೆ ನೀಡಿದರು.
ಪಟ್ಟಣ ಬಾಲಕೀಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ವಿವಿಧ ಕ್ರೀಡೆಗಳ ಆಯ್ಕೆಗಾಗಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಬೇಕು. ಅದರ ಸದುಪಯೋಗ ಪಡೆಸಿಕೊಳ್ಳಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಿದರೆ, ಆರೋಗ್ಯ ವೃದ್ದಿ ಹಾಗೂ ದೈಹಿಕವಾಗಿ ಸಧೃಡವಾಗಬಹುದು. ಕ್ರೀಡೆಯಲ್ಲಿ ಭಾಗವಹಸಿದರೆ ರಾಜ್ಯ, ರಾಷ್ಟಮಟ್ಟದಲ್ಲಿ ಒಳ್ಳೆಯ ಪ್ರದರ್ಶನವನ್ನು ನೀಡಿದರೆ ನಮ್ಮ ಜಿಲ್ಲೆಗೆ ಹಾಗೂ ಪೋಷಕರಿಗೆ ಒಳ್ಳೆಯ ಹೆಸರು ತಂದಹಾಗೆ ಎಂದರು. ಅಲ್ಲಿ ನೀಡುವ ಪ್ರಶಸ್ತಿ ಪತ್ರ ಪಡೆದರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುತ್ತದೆ.
ಅಥ್ಲೆಟಿಕ್ ಕೋಚ್ ವೆಂಕಟೇಶ್ ಮಾತನಾಡಿ ಸರ್ಕಾರದಿಂದ ಪ್ರತಿ ವರ್ಷ ಕ್ರೀಡಾ ಶಾಲೆಗಳಿಗೆ ಮತ್ತು ವಸತಿ ನಿಲಯಗಳಿಗೆ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. ರಾಜ್ಯದ 35 ಜಿಲ್ಲೆಗಳಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 4, 5, 7, 8 ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರವೇಶವಿರುತ್ತದೆ. ಈ ವರ್ಷ ವಿಭಾಗ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಿ ಕಳುಹಿಸುತ್ತಾರೆ. ಇದನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳ ಬೇಕು ಎಂದು ಸಲಹೆ ನೀಡಿದರು.
ಪ್ರತಿಭೆ ಗುರ್ತಿಸಿ ಜಿಲ್ಲಾ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನುರಿತ ತರಬೇತಿದಾರರಿಂದ ತರಬೇತಿ ನೀಡಲಾಗುವುದು ಹಾಗೂ ಊಟ, ವಸತಿ ವ್ಯವಸ್ಥೆ ಮಾಡಲಾಗುವುದು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ .ಕೋಲಾರ ಸಹಾಯಕ ನಿರ್ದೇಶಕಿ ಜಿ.ಎಂ. ಶಶಿಕಲಾ, ಫುಟ್ಬಲ್ ಕೋಚ್ ನಾಸೀರ್ ಭಾಷ, ಬಿಇಒ ವ್ಯವಸ್ಥಾಪಕ ರಾಜೇಖರ್ ರೆಡ್ಡಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳಾದ ಎಸ್ .ವೆಂಕಟಸ್ವಾಮಿ, ಮದನ್, ಬಿಆರ್‍ಪಿ ವೆಂಕಟಚಾಲಪತಿ, ಶಿಕ್ಷಕರಾದ ನಾರಾಯಣಸ್ವಾಮಿ, ಶಿವಣ್ಣ ಇದ್ದರು.