ಶ್ರೀನಿವಾಸಪುರ ತಾಲ್ಲೂಕಿನ ಆಲಂಬಗಿರಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಕೆ.ಆರ್.ರಮೇಶ್ ಕುಮಾರ್ ಉದ್ಘಾಟಿಸಿದರು

ಶ್ರೀನಿವಾಸಪುರ ತಾಲ್ಲೂಕಿನ ಆಲಂಬಗಿರಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಕೆ.ಆರ್.ರಮೇಶ್ ಕುಮಾರ್ ಮಂಗಳವಾರ ಉದ್ಘಾಟಿಸಿದರು.
ಶ್ರೀನಿವಾಸಪುರ: ಅಂತರ್ಜಲ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಮಾತ್ರ ಕೆಸಿ ವ್ಯಾಲಿ ನೀರು ಕೆರೆಗಳಿಗೆ ಹರಿಸಲಾಗುತ್ತಿದೆ. ಸಧ್ಯಕ್ಕೆ ಎರಡು ಹಂತದಲ್ಲಿ ಶುದ್ಧೀಕರಿಸಲಾಗುತ್ತಿದೆ. ಆ ಬಗ್ಗೆ ಅನಗತ್ಯ ಮಾತು ಬೇಕಾಗಿಲ್ಲ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಆಲಂಬಗಿರಿಯಲ್ಲಿ ರೂ.20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕೆಸಿ ವ್ಯಾಲಿ ಯೋಜನೆಯನ್ನು ಮಧ್ಯಪ್ರದೇಶ ಸರ್ಕಾರ ಮಾದರಿಯಾಗಿ ಸ್ವೀಕರಿಸಿ ಜಾರಿಗೆ ತರುತ್ತಿದೆ ಎಂದು ಹೇಳಿದರು.
ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ಡಿಸಿಸಿ ಬ್ಯಾಂಕ್ ವತಿಯಿಂದ ನೀಡಲಾಗುತ್ತಿರುವ ಬಡ್ಡಿ ರಹಿತ ಸಾಲ ಮತಗಳಿಕೆಗಾಗಿ ಅಲ್ಲ. ಅವರನ್ನು ಖಾಸಗಿ ಲೇವಾದೇವಿಗಾರರ ಶೋಷಣೆಯಿಂದ ತಪ್ಪಿಸುವ ಹಾಗೂ ಆರ್ಥಿಕವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ನೀಡಲಾಗಿದೆ. ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡ್ಡಿರಹಿತ ಸಾಲದ ಮೊತ್ತ ಹೆಚ್ಚಿಸಲಾಗುವುದು ಎಂದು ಹೇಳಿದರು.
ಹಾಲು ಜಿಲ್ಲೆಯ ರೈತರ ಜೀವನಾಡಿ. ರೈತರು ವೈಜ್ಞಾನಿಕ ಪದ್ಧತಿ ಅನುಸರಿದಿ ಹಾಲು ಉತ್ಪಾದಿಸಬೇಕು. ಹಸು ಸಾಕಾಣಿಕೆಯಲ್ಲಿ ಮಹಿಳೆಯರ ಪಾತ್ರ ಹಿರಿದು. ಹಾಗಾಗಿ ಮಹಿಳೆ ಹೈನುಗಾರಿಕೆಗೆ ಜೀವಾಳ ಎಂದು ಅಭಿಪ್ರಾಯಪಟ್ಟರು.
ಸಂಘದ ಅಧ್ಯಕ್ಷ ವಿ.ಅಯ್ಯಪ್ಪ, ಕೋಮುಲ್ ನಿರ್ದೇಶಕ ಎನ್.ಹನುಮೇಶ್, ಮಾಜಿ ಅಧ್ಯಕ್ಷ ಎನ್.ಜಿ.ಬ್ಯಾಟಪ್ಪ, ಮಾಜಿ ನಿರ್ದೇಶಕ ಮುನಿವೆಂಕಟಪ್ಪ, ಉಪ ವ್ಯವಸ್ಥಾಪಕ ಕೆ.ಎಂ.ಮುನಿರಾಜು, ಮೋಹನ್ ಬಾಬು, ರತ್ನಮ್ಮ ವೆಂಕಟರವಣಪ್ಪ, ವಿ.ಮನೋಹರ್, ಬಿ.ಎಲ್.ವೆಂಕಟರೆಡ್ಡಿ, ಮುಖಂಡರಾದ ನಾಗರಾಜ್, ಬಿ.ವಿ.ವೆಂಕಟರೆಡ್ಡಿ, ಕೆ.ಕೆ.ಮಂಜು, ಎಂ.ಶ್ರೀನಿವಾಸನ್, ನಾರಾಯಣಸ್ವಾಮಿ, ಸಂಜಯ್‍ರೆಡ್ಡಿ, ಅನ್ಕೀಸ್ ಅಹ್ಮದ್, ಕೃಷ್ಣಾರೆಡ್ಡಿ, ಮಂಜುನಾಥರೆಡ್ಡಿ ಇದ್ದರು.