ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಹೆತ್ತವರು ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಏಪ್ರಿಲ್ 8ರಂದು ಹೆತ್ತವರು ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರವಿರಾಜ್ ನಾಯಕ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇರುವಂತಹ ನೆಲೆಗಳನ್ನು ತಿಳಿಸಿದರು. ವಿದ್ಯಾರ್ಥಿಗಳು ತಮ್ಮನ್ನು ತಾವು ಮೊದಲು ಅರಿಯಬೇಕು. ತನ್ನಲ್ಲಿರುವ ಕೌಶಲಗಳನ್ನು ಗುರುತಿಸಿಕೊಳ್ಳಬೇಕು. ಜೊತೆಗೆ ಉತ್ತಮ ಅಂಕಗಳನ್ನು ಪಡೆಯುವುದು ತುಂಬಾ ಮುಖ್ಯ. ಅಲ್ಲದೆ ಸಾಮಾನ್ಯ ಜ್ಞಾನ ಅಷ್ಟೇ ಅಗತ್ಯ ಅಲ್ಲದೆ ಹೆತ್ತವರ ಜವಾಬ್ದಾರಿಯನ್ನು ನೆನಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಪ್ರಭಾವತಿ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ.ಶಾಂತಾರಾಮ್ ಪ್ರಭು, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ, ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಆದಂ ಗುಲ್ವಾಡಿ, ರಾಜೇಂದ್ರ ಉರಾಳ್ ಪ್ರಾಕ್ತನ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಸತ್ಯನಾರಾಯಣ ಸ್ವಾಗತಿಸಿದರು. ಇತಿಹಾಸ ಪ್ರಾಧ್ಯಾಪಕ ಪ್ರೊ. ಗೋಪಾಲ್ ಕೆ ವಂದಿಸಿದರು.