ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಮತದಾರರು ಜೆಡಿಎಸ್ ಬೆಂಬಲಿಸಬೇಕು : ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಮತದಾರರು ಜೆಡಿಎಸ್ ಬೆಂಬಲಿಸಬೇಕು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಏರ್ಪಡಿಸಿದ್ದ ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಡಿನ ಅಭಿವೃದ್ಧಿ ಬಗ್ಗೆ ಕೈಗೊಂಡಿರುವ ದೀಕ್ಷೆ ಸಾಕಾರಗೊಳ್ಳಲು, ಮತದಾರರು ಶಕ್ತಿ ತುಂಬಬೇಕು ಎಂದು ಹೇಳಿದರು.
ಜೆಡಿಎಸ್‍ನ ಜಲಧಾರೆ ಯೋಜನೆ ಜಿಲ್ಲೆಗೆ ವರದಾನವಾಗಲಿದೆ. ಈ ಯೋಜನೆಯಡಿ ಜಿಲ್ಲೆಗೆ ಕುಡಿಯಲು ಹಾಗೂ ವ್ಯವಸಾಯಕ್ಕೆ ಯೋಗ್ಯವಾದ ನೀರು ಪೂರೈಸಲಾಗುವುದು. ಪಂಚರತ್ನ ಯೋಜನೆ ಸಮಾಜದ ಎಲ್ಲ ವರ್ಗದ ಜನರ ಪಾಲಿಗೆ ಹೆಚ್ಚು ಉಪಯುಕ್ತವಾಗಿದೆ. ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣಿಗೆ ರೂ.2 ಲಕ್ಷ ನೀಡುವ ವಿಶೇಷ ಯೋಜನೆ ರೂಪಿಸಲಾಗಿದೆ. ಪ್ರತಿ ರೈತ ಕುಂಟುಂಬಕ್ಕೆ ರೂ.10 ಸಾವಿರ ನೀಡಲಾಗುವುದು. ಇದೆಲ್ಲವೂ ಸಾಧ್ಯವಾಗಬೇಕಾದರೆ ಜೆಡಿಎಎಸ್ ಅಧಿಕಾರಕ್ಕೆ ಬರಬೇಕೆಂದು ಹೇಳಿದರು.
ಎಚ್.ಡಿ.ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಅವಧಿಯಲ್ಲಿ ಟೊಮೆಟೊ ಹಾಗೂ ಮಾವಿಗೆ ಬೆಂಬಲ ಬೆಲೆ ನೀಡುವುದರ ಮೂಲಕ ರೈತರ ಬೆನ್ನಿಗೆ ನಿಂತರು. ರೂ.25 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ತಾಲ್ಲೂಕಿನ ಶಾಸಕರು, ಕಾಂಗ್ರೆಸ್ ನಾಯಕರು ಮೂರರಿಂದ ನಾಲ್ಕು ತಲೆಮಾರಿಗೆ ಬೇಕಾಗುಷ್ಟು ಸಂಪಾದನೆ ಮಾಡಿಕೊಂಡಿದ್ದಾರೆ ಎಂಬುದನ್ನು ತಮ್ಮ ಮಾತಿನ ಮೂಲಕ ಬಯಲು ಮಾಡಿದ್ದಾರೆ ಎಂದು ಹೇಳಿದರು.
ನಾನು ಶಾಸಕನಾಗಿದ್ದ 4 ಅವಧಿ ಹೊರತುಪಡಿಸಿದರೆ ತಾಲ್ಲೂಕು ಅಭಿವೃದ್ಧಿ ಕಂಡಿಲ್ಲ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡವನ್ನು ನಿರ್ಲಕ್ಷಿಸಲಾಗಿದೆ. ಅವರಿಗೆ ಸರ್ಕಾರದ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ಕೃಷಿ ಕೊಳವೆ ಬಾವಿ ನಿರ್ಮಿಸಿಕೊಟ್ಟಿಲ್ಲ. ಶಾಸಕರು ಜನರಿಗೆ ನೀಡಿದ್ದ ಭರವಸೆಗಳು, ಭರವಸೆಗಳಾಗಿಯೇ ಉಳಿದಿವೆ ಎಂದು ಹೇಳಿದರು.
ಜೆಡಿಎಸ್ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಸ್ತ್ರೀ ಶಕ್ತಿ ಸಂಘದ ಸದಸ್ಯರು ಪಡೆದುಕೊಂಡಿರುವ ಸಾಲ ಮನ್ನಾ ಮಾಡಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅವರು ಯಾವುದೇ ಸಂದರ್ಭದಲ್ಲೂ ನುಡಿದಂತೆ ನಡೆದುಕೊಳ್ಳುತ್ತಾರೆ. ಸಶಕ್ತ ರಾಜ್ಯ ನಿರ್ಮಾಣಕ್ಕಾಗಿ ಅವರ ಕೈ ಬಲಪಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಎಂ.ವಿ.ಶ್ರೀನಿವಾಸ್, ಎಂ.ಎನ್.ಗಣೇಶ್, ಜಿ.ರಾಜಣ್ಣ, ಪುರಸಭೆ ಉಪಾಧ್ಯಕ್ಷೆ ಆಯಿಷಾ ನಯಾಜ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಬಾಲಾವತಿ, ಮುಖಂಡರಾದ ಬಿ.ವೆಂಕಟರೆಡ್ಡಿ, ಕುಂದಟಿವಾರಿಪಲ್ಲಿ ಶಿವಾರೆಡ್ಡಿ, ಮಧುಸೂದನರೆಡ್ಡಿ, ಅಪ್ಪೂರು ರಾಜು, ಆನಂದ್, ಶಬ್ಬೀರ್, ವಿ.ನಾಗಭೂಷಣ್, ಶ್ರೀನಾಥ್, ಎಂ.ಆರ್.ಸುಧಾಕರ್, ಸಿ.ರವಿ, ನಂದರೆಡ್ಡಿ, ಸಂತೋಷ್, ಪೂಲ ಶಿವಾರೆಡ್ಡಿ, ಮನು, ಶ್ರೀನಿವಾಸಪ್ಪ, ಶ್ರೀರಾಮ್, ನಾಗಣ್ಣ, ಮಂಜುನಾಥರೆಡ್ಡಿ, ಚಂದ್ರಕಳ, ಮುನಿರಾಜು, ಅಶೋಕ್, ಕೃಷ್ಣಪ್ಪ, ಲಕ್ಷ್ಮಣರೆಡ್ಡಿ, ಮಂಜುಳ ರಾಮಚಂದ್ರೇಗೌಡ ಇದ್ದರು.
ರೋಡ್ ಶೋ: ಮಾಜಿ ಶಾಸಕ ಹಾಗೂ ಕ್ಷೇತ್ರದ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಪಟ್ಟಣದ ಎಂ.ಜಿ.ರಸ್ತೆಯಲ್ಲಿ ರೋಡ್ ಶೋ ನಡೆಸಿ ಮತ ಯಾಚನೆ ಮಾಡಿದರು.