ಮತದಾರರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಬೇಕು : ಬಿಜೆಪಿ ಅಭ್ಯರ್ಥಿ ಜಿ.ಆರ್.ಶ್ರೀನಿವಾಸರೆಡ್ಡಿ

ಶ್ರೀನಿವಾಸಪುರ: ಮತದಾರರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಜಿ.ಆರ್.ಶ್ರೀನಿವಾಸರೆಡ್ಡಿ ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದ ಬಳಿಕ ಮಾತನಾಡಿ, ಬಿಜೆಪಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಸ್ಥಳೀಯ ಕಾಂಗ್ರೆಸ್ ಮುಖಂಡರು ಬಿಜೆಪಿಯೊಂದಿಗೆ ಜೆಡಿಎಸ್ ಸಮೀಕರಿಸಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು..
ಕ್ಷೇತ್ರದ ಜನರ ಸೇವೆ ಮಾಡುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ತಾಲ್ಲೂಕಿನಲ್ಲಿ ಬಿಜೆಪಿ ಸಂಘಟನೆ ಬಲವಾಗಿದೆ. ಮುಖಂಡರು ಹಾಗೂ ಕಾರ್ಯಕರ್ತರು ಮತದಾರರನ್ನು ನೇರವಾಗಿ ಸಂಪರ್ಕಿಸಿ ಮತಯಾಚನೆ ಮಾಡುತ್ತಿದ್ದಾರೆ. ಮತದಾರರಿಂದಲೂ ಉತ್ತಮ ಸ್ಪಂದನೆ ಕಂಡುಬರುತ್ತಿದೆ. ಈವರೆಗೆ ಇಬ್ಬರಿಗೆ ಮಾತ್ರ ಮತ ನೀಡಿ ನೋಡಿದ್ದೀರಿ. ಈ ಬಾರಿ ಬಿಜೆಪಿ ಗೆಲ್ಲಿಸಿ ಬದಲಾವಣೆಗೆ ದಾರಿಮಾಡಿಕೊಡಿ ಎಂದು ಮನವಿ ಮಾಡಿದರು.
ತಾಲ್ಲೂಕು ಬಿಜೆಪಿ ಅಧ್ಯಕ್ಷ ಅಶೋಕರೆಡ್ಡಿ, ಮುಖಂಡರಾದ ಎನ್.ರಾಜೇಂದ್ರ ಪ್ರಸಾದ್, ರಾಜಶೇಖರರೆಡ್ಡಿ, ರಾಮಾಂಜಿ, ಸುರೇಶ್, ರಮೇಶ್, ಸೈಯದ್ ಷಫಿವುಲ್ಲಾ, ಶ್ರೀನಾಥ್, ಬಂಗವಾದಿ ನಾಗರಾಜ್, ಟಿ.ಮಂಜುನಾಥರೆಡ್ಡಿ, ಷಂಷೀರ್, ಶ್ರೀರಾಮ್, ರಂಜಿತ್. ಮದನ್ ಇದ್ದರು.
3
ಶ್ರೀನಿವಾಸಪುರದಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಕೆ.ಆರ್.ರಮೇಶ್ ಕುಮಾರ್ ಪರವಾಗಿ ಮತಯಾಚನೆ ಮಾಡಿದರು. ಮುಖಂಡರಾದ ದಿಂಬಾಲ ಅಶೋಕ್, ಬಿ.ಎನ್.ಸೂರಣ್ಣ, ಮಂಜುನಾಥರೆಡ್ಡಿ, ಎನ್.ಎನ್.ಆರ್.ನಾಗರಾಜ್, ರಮೇಶ್ ಇದ್ದರು.
4.
ಶ್ರೀನಿವಾಸಪುರದಲ್ಲಿ ಶುಕ್ರವಾರ ಪುರಸಭೆ ಉಪಾಧ್ಯಕ್ಷೆ ಆಯಿಷಾ ನಯಾಜ್ ಜೆಡಿಎಸ್ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಪರವಾಗಿ ಮತಯಾಚನೆ ಮಾಡಿದರು.