ಕೋಟ: ಸಮಾಜದ ಕಾರ್ಯಕ್ರಮದಲ್ಲಿ ಎಲ್ಲರೂ ಒಗ್ಗಟ್ಟಾಗಿ ದುಡಿದಾಗ ಸಮಾಜ ಬೆಳೆಯಲು ಸಾಧ್ಯ. ಸಾಮೂಹಿಕ ಬ್ರಹ್ಮೋಪದೇಶ ಸ್ವೀಕರಿಸಿದ ವಟುಗಳು ತಂದೆ ತಾಯಿ ಗುರುಹಿರಿಯರನ್ನು ಗೌರವಿಸುವುದರೊಂದಿಗೆ ಬ್ರಹ್ಮೋಪದೇಶದ ದೀಕ್ಷಗೆ ಬದ್ಧರಾಗಿರಬೇಕು ಎಂದು ಬೆಂಗಳೂರು ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ಹೆಚ್.ಟಿ ನರಸಿಂಹ ಹೇಳಿದರು.
ಅವರು ಭಾನುವಾರ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ಕುಂದಾಪುರ ವ್ಯಾಸರಾಜ ಮಠದಲ್ಲಿ ಜರುಗಿದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಾಮೂಹಿಕ ಬ್ರಹ್ಮೋಪದೇಶ ಸಮಾರಂಭದಲ್ಲಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ವಹಿಸಿದ್ದರು. ಉಪಾಧ್ಯಕ್ಷರಾದ ರವಿ ಗಾಣಿಗ ಆಜ್ರಿ, ಪ್ರಮೋದ್ ಗಾಣಿಗ ಗಂಗೊಳ್ಳಿ, ಕಾರ್ಯದರ್ಶಿ ನಾಗರಾಜ ಗಾಣಿಗ ಬಸ್ರೂರು, ಕೋಶಾಧಿಕಾರಿ ನಾಗಾರಾಜ ಗಾಣಿಗ ಹಿಲ್ಕೋಡು ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪುರದ ವ್ಯಾಸರಾಜ ಮಠದ ಅರ್ಚಕ ವಿಜಯ ಪೇಜತ್ತಾಯ ಧಾರ್ಮಿಕ ವಿಧಿವಿಧಾನವನ್ನು ನೆರವೇರಿಸಿದರು. ಒಟ್ಟು 47 ಮಂದಿ ಸಮಾಜದ ವಟುಗಳಿಗೆ ಬ್ರಹ್ಮೋದೇಶವನ್ನು ನೀಡಲಾಯಿತು. ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.