ಸಾರ್ವಜನಿಕರು ಪರಿಸರಕ್ಕೆ ಹಾನಿ ಉಂಟುಮಾಡುವ ಕೃತ್ಯಗಳಿಗೆ ಕಡಿವಾಣ ಹಾಕಬೇಕು : ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು

ಶ್ರೀನಿವಾಸಪುರ: ಸಾರ್ವಜನಿಕರು ಪರಿಸರಕ್ಕೆ ಹಾನಿ ಉಂಟುಮಾಡುವ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ಪಟ್ಟಣದ ಪುರಸಭೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜನ, ಜಾನುವಾರು ಆರೋಗ್ಯ ಹಾಗೂ ಸ್ವಚ್ಛತೆಗೆ ಸವಾಲಾಗಿರುವ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು. ವೈಜ್ಞಾನಿಕ ವಿಧಾನದಲ್ಲಿ ಕಸದ ನಿರ್ವಹಣೆ ಮಾಡಬೇಕು ಎಂದು ಹೇಳಿದರು.
ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ನಾಗರಿಕರಿಗೆ 2000 ಸಸಿ ವಿತರಣೆ ಮಾಡಲಾಗಿದೆ. ಸಾಧ್ಯವಿರು ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡಲಾಗಿದೆ. ಸಾರ್ವಜನಿಕರ ಕಾಳಜಿ ಇದ್ದಲ್ಲಿ ಮಾತ್ರ ನೆಟ್ಟ ಗಿಡ ಮರವಾಗಿ ಬೆಳೆಯಬಲ್ಲದು. ಈ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಬೇಕು. ಪುರಸಭೆ ಮನೆಯಲ್ಲಿ ವಸ್ತುಗಳ ಬಳಕೆ ಕಡಿಮೆ ಮಾಡುವ ಬಗ್ಗೆ, ಪುನರ್ ಬಳಕೆ ಹಾಗೂ ಪುನರ್ ಸೃಷ್ಟಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಬಟ್ಟೆ ಚೀಲ ಬಳಕೆ ಬಗ್ಗೆ ಸಾಕಷ್ಟು ಪ್ರಚಾರ ಮಾಡುತ್ತಿದೆ. ಪರಿಸರ ಕಾಳಜಿ ಒಂದು ದಿನಕ್ಕೆ ಸೀಮಿತವಾಗದೆ, ನಿರಂತರವಾಗಿ ಇರಬೇಕು ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ವ್ಯವಸ್ಥಾಪಕ ನವೀನ್ ಚಂದ್ರ, ಪರಿಸರ ರಾಯಭಾರಿ ಮಾಂiÀi ಬಾಲಚಂದ್ರ, ಕಂದಾಯ ಅಧಿಕಾರಿ ವಿ.ನಾಗರಾಜ್, ಕಂದಾಯ ನಿರೀಕ್ಷಕ ಎಸ್.ಶಂಕರ್, ಹಿರಿಯ ಆರೋಗ್ಯ ನಿರೀಕ್ಷ ಕೆ.ಜಿ.ರಮೇಶ್, ಎಂಜಿನಿಯರ್ ಶಾಸ್ತ್ರಿ, ಬಿ.ವೆಂಕಟರೆಡ್ಡಿ ಇದ್ದರು.