ನವದೆಹಲಿ, ಜು.೪: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.
ಈಗ ರಾಹುಲ್ ಗಾಂಧಿ ಸಂಸದ ಸ್ಥಾನದ ಅನರ್ಹತೆಯಿಂದ ರಕ್ಷಿತರಾಗಿದ್ದಾರೆ. ಅವರು ಕೇರಳದ ವೈಯನಾಡು ಲೋಕಸಭೆ ಕ್ಷೇತ್ರದ ಸಂಸದರಾಗಿ ಮುಂದುವರಿಯಲಿದ್ದಾರೆ.
ಪ್ರಕರಣ ಸಂಬಂಧ ಗುಜರಾತ್ ಹೈಕೋರ್ಟ್ ನೀಡಿದ್ದ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ. ರಾಹುಲ್ ಗಾಂಧಿ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು.