ಚಿನ್ಮಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ರಚನ ಅವರಿಗೆ, ಮಹಾತ್ಮ ಗಾಂಧಿಜಿಯವರ ಕುರಿತು ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕೋಲಾರ : ತಾಲೂಕಿನ ಚೊಕ್ಕಹಳ್ಳಿಯ ಚಿನ್ಮಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿ.ಎಂ.ರಚನ ಅವರಿಗೆ, ಮಹಾತ್ಮ ಗಾಂಧಿಜಿಯವರ ಕುರಿತು ಜಿಲ್ಲಾಮಟ್ಟದಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ದೊರಕಿದೆ.

ಮಹಾತ್ಮ ಗಾಂಧಿಜಿಯವರ ೧೫೪ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಪದವಿ/ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ “ಭಾಪೂಜಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಈ ಸ್ಪರ್ಧೆಯ ಅಂಗವಾಗಿ ತಾಲೂಕಿನ ಚೊಕ್ಕಹಳ್ಳಿಯ ಚಿನ್ಮಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಹಾಗೂ ಚೌಡದೇನಹಳ್ಳಿಯ ವಾಸಿ ಸಿ.ಎಂ.ರಚನ ಬರೆದಿದ್ದ ಪ್ರಬಂಧಕ್ಕೆ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಪ್ರಥಮ ಬಹುಮಾನಕ್ಕೆ ಆಯ್ಕೆಯಾಗಿತ್ತು.

ನಗರದ ಟಿ.ಚನ್ನಯ್ಯ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಭಾರತ್ ಸೇವಾದಳ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ, ಅ. ೨ ರಂದು ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿಪತ್ರದೊಂದಿಗೆ ನಗದು ಬಹುಮಾನ ನೀಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಜಿಲ್ಲಾಧಿಕಾರಿ ಅಕ್ರಂಪಾಷ, ನಿವೃತ್ತ ಐ.ಎ.ಎಸ್ ಅಧಿಕಾರಿ ಚಿರಂಜೀವಿ ಸಿಂಗ್, ಭಾರತ್ ಸೇವಾದಳದ ಜಿಲ್ಲಾ 

ಅಧ್ಯಕ್ಷ ಕೆ.ಎಸ್. ಗಣೇಶ್, ಸಮಾಜ ಸೇವಕ ಸಿ.ಎಂ.ಆರ್.ಶ್ರೀನಾಥ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಹಣಾಧಿಕಾರಿ ಪದ್ಮ ಬಸವಂತಪ್ಪ, ಹೆಚ್ಚುವರಿ ರಕ್ಷಣಾಧಿಕಾರಿ ಬಿ.ವಿ.ಭಾಸ್ಕರ್, ಅರಣ್ಯ ಅಧಿಕಾರಿ ಏಡುಕೊಂಡಲು, ತಹಸೀಲ್ದಾರ್ ಹರ್ಷವರ್ಧನ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ.ಚೇತನ್‌ಕುಮಾರ್, ಸಹಾಯಕರಾದ ಕೌಸಲ್ಯ ಮತ್ತಿತರರು ಇದ್ದರು.