ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರುವ ವ್ಯವಸ್ಥೆಯನ್ನು  ಸ್ಥಳೀಯ ಸಹಕಾರದಿಂದ ಅಧಿಕಾರಿಗಳು ಮಾಡಬೇಕಾಗಿದೆ : ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ  : ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರುವ ವ್ಯವಸ್ಥೆಯನ್ನು  ಸ್ಥಳೀಯ ಸಹಕಾರದಿಂದ ಅಧಿಕಾರಿಗಳು ಮಾಡಬೇಕಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು. 

ಪಟ್ಟಣದ ಪುರಸಭೆಯಲ್ಲಿ ಗುರುವಾರ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಮಾತನಾಡಿದರು. 

ಕುಂದುಕೊರತೆ ಸಭೆಯಲ್ಲಿ ಸಾರ್ವಜಿನಕರೊಂದಿಗೆ ಮಾತನಾಡುತ್ತಾ ಯಾವುದೇ ಕಛೇರಿಯಲ್ಲಿ ತಮ್ಮ ಕೆಲಸ ಕಾರ್ಯಗಳು ನಡೆಯದೆ ಇದ್ದರೆ ಅಥವಾ ನಿಮ್ಮ ಕೆಲಸಗಳನ್ನು ಸಂಬಧಿಸಿದ ಅಧಿಕಾರಿ ಮಾಡಿಕೊಡದೆ ಇದ್ದ ಪಕ್ಷದಲ್ಲಿ ನನಗೆ ಮಾಹಿತಿ ನೀಡಿದರೆ ಆ ಅಧಿಕಾರಿಯೊಂದಿಗೆ ನಿಮ್ಮ ಸಮಸ್ಯೆಯ ಬಗ್ಗೆ ಚರ್ಚೆ ಮಾಡಿ ಪರಿಹಾರ ನೀಡಲಾಗುವುದು ಎಂದು ಭರವಸೆ ಇತ್ತರು. 

ಕ್ಷೇತ್ರಾದ್ಯಾಂತ ಎಲ್ಲಾ ಹಳ್ಳಿಗಳಲ್ಲಿಯೂ ರಸ್ತೆ, ಕುಡಿಯುವ ನೀರು, ಬೀದಿ ದೀಪಗಳು , ಬಗ್ಗೆ ಹಾಗೂ ಪಟ್ಟಣದಲ್ಲಿ ಸ್ವಚ್ಚತೆ ಹಾಗೂ ಇತರೆ ಮೂಲ ಭೂತ ಸೌಲಭ್ಯಗಳ ಸ್ಥಿತಿ ಗತಿಗಳ ಬಗ್ಗೆ ಅಧಿಕಾರಿಗಳಿಂದ ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದು ಕೊರೆತೆಗಳ ಬಗ್ಗೆ ಸಂಬAದ ಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದರು. 

ಇನ್ನು ಕುಂದು ಕೊರತೆ ಸಭೆಗೆ ಕೆಲ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಲು ತಂದ ಅರ್ಜಿಗಳನ್ನು ಪರಿಶೀಲಿಸಿ ಸಂಬAದಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಚರ್ಚೆ ಮಾಡಿ ಅರ್ಜಿದಾರನ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹಾರ ನೀಡುವಂತೆ ಸೂಚಿಸಿದರು. 

ಜಿ.ಪಂ. ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿವಾಸ್ ಹಾಗೂ ಅಧಿಕಾರಿಗಳು ಇತರ ಮುಖಂಡರು ಇದ್ದರು.