ಚಿಕ್ಕಬಳ್ಳಾಪುರ: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಏಕಾಏಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ
ಘಟನೆ ಮುನ್ಸಿಪಾಲ್ ಕಾಲೇಜಿನ ಮುಂಭಾಗದ ಫರ್ಜಾನಾ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆ ಮಾಲೀಕೆಯಾದ ಫರ್ಜಾನಾ ಕೆಲಸಕ್ಕೆ ತೆರಳಿದ್ದ ವೇಳೆ ಅವರ ಮಗ ರಫೀಕ್ (4) ಹಾಗೂ ಮಗಳು ಹರ್ಷಿಯಾ ಭಾನು (10) ಮನೆಯಲ್ಲಿದ್ದರು. ಈ ವೇಳೆ ಮನೆಯಿಂದ ಗ್ಯಾಸ್
ವಾಸನೆ ಬರುತ್ತಿದೆ ಎಂದು ಪಕ್ಕದ ಮನೆಯ ಹೇಮಾವತಿ (8) ಎಂಬಾಕೆ ಬಂದಿದ್ದಾಳೆ ಇದೇ ವೇಳೆ ತಕ್ಷಣ ಬೆಂಕಿ ಹೊತ್ತಿಕೊಂಡಿದ್ದು ಸಿಲಿಂಡರ್ ಸ್ಫೋಟ ಗೊಂಡಿದೆ.
ಘಟನೆಯಲ್ಲಿ ಮೂವರು ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರಿಗೂ 35 ರಿಂದ 40% ಸುಟ್ಟ ಗಾಯಗಳಾಗಿದ್ದು ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಪಾತ್ರೆ ಹಾಗೂ ಸಾಮಾನುಗಳು ಎಲ್ಲವೂ ಚೆಲ್ಲಾಪಿಲ್ಲಿಯಾಗಿವೆ. ಮನೆಯ ಮೇಲಿನ ತಗಡಿನ ಕೀಟ್ಗಳು ಹಾರಿ ಹೋಗಿವೆ. ಹಿಂಬದಿಯ ಮನೆಯ ಎರಡು ಬೈಕ್ಗಳು ಹಾನಿಗೊಳಗಾಗಿವೆ. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪಿಎಸ್ಐ ನಂಜುಂಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.