ಬೆಂಗಳೂರು : ನಾಯಿ ಕಡಿತದಿಂದ ಮೃತಪಟ್ಟರೇ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ನಾಯಿ ಕಡಿತದಿಂದ ಗಾಯಗೊಂಡವರಿಗೆ 5 ಸಾವಿರ ರೂ. ಮತ್ತು ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.ವಕೀಲ ರಮೇಶ್ ಎಲ್ ನಾಯಕ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಭೆ ನಡೆಸಬೇಕು. 4 ವಾರದಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚಿಸಿದೆ.ಬೀದಿ ನಾಯಿಗಳಿಗೆ ಆಹಾರ ನೀಡಲು ಮಾರ್ಗಸೂಚಿ ಪ್ರಕಟಿಸಲಾಗಿದೆ.
ಜನಸಾಮಾನ್ಯರಿಗೆ ಇದರ ತಿಳಿವಳಿಕೆ ನೀಡಲು ಕ್ರಮ ಕೈಗೊಳ್ಳಬೇಕು. ವಾರ್ತಾ, ಪ್ರಚಾರ ಇಲಾಖೆ ವ್ಯಾಪಕ ಪ್ರಚಾರ ನೀಡಬೇಕು ಎಂದು ಹೇಳಿದೆ.