ಕುಂದಾಪುರ,ನ.27: ಜಗತ್ತಿನಾದ್ಯಂತ ಕ್ರೈಸ್ತ ಧರ್ಮಸಭೆಯಲ್ಲಿ ಯೇಸು ಕ್ರಿಸ್ತರ ಜನನದ 2025 ವರ್ಷಗಳ ಸ್ಮರಣಾರ್ಥವಾಗಿ ಕ್ರಿಸ್ತ ಜಯಂತಿ ಜುಬಿಲಿ 2025 ಸಂಭ್ರಮಾಚರಣೆಯ ಪೂರ್ವ ಸಿದ್ದತೆಗಳಿಗೆ ಚಾಲನೆ ನಡೆಯುತ್ತಿದ್ದು ಉಡುಪಿ ಕಥೊಲಿಕ ಧರ್ಮಕ್ಷೇತ್ರದಲ್ಲಿಯೂ ಎರಡು ವರ್ಷಗಳ ಪೂರ್ವ ತಯಾರಿಗಳಿಗಾಗಿ ಕುಂದಾಪುರದ ರೋಜರಿ ಮಾತಾ ಚರ್ಚಿನಲ್ಲಿ ಭರವಸೆಯ ಯಾತ್ರಿಕರು ಎಂಬ ಧ್ಯೇಯ ವಾಕ್ಯವನ್ನು ಒಳಗೊಂಡ ಲಾಂಛನ ನವೆಂಬರ್ 26 ರಂದು ಅನಾವರಣದೊಂದಿಗೆ ಚರ್ಚಿನ ಪ್ರಧಾದ ಧರ್ಮಗುರ್ ಅ|ವಂ|ಸ್ಟಾನಿ ತಾವ್ರೊ, ಮುಖ್ಯ ಅತಿಥಿಗಳಾದ ಕಂಡ್ಲೂರು ಚರ್ಚಿನ ಧರ್ಮಗುರು ವಂ| ಕೆನ್ಯೂಟ್ ಬಾರ್ಬೊಜಾ ವಿದ್ಯುಕ್ತವಾಗಿ ಚಾಲನೆ ನೀಡಿದರು
ಜಗದ್ಗುರು ಪೋಪ್ ಫ್ರಾನ್ಸಿಸ್ ರವರು ಕಲಿಕಾ ವರ್ಷದಲ್ಲಿ ಎರಡನೇ ವ್ಯಾಟಿಕನ್ ಕೌನ್ಸಿಲ್ನ ನಾಲ್ಕು ಸಂವಿಧಾನಗಳ ಅಧ್ಯಯನವನ್ನು ನಡೆಸಲುನಿರ್ದೇಶಿಸಿದ್ದಾರೆ. ಈ ಸಂವಿಧಾನಗಳ ಆಧ್ಯಯನದಿಂದ ನಮ್ಮ ವಿಶ್ವಾಸವನ್ನು ಆಳವಾಗಿ ಆರಿಯಲು ಮತ್ತು ಪ್ರಾರ್ಥನಾ ಸ್ಪೂರ್ತಿಯಿಂದ ಈ ಜಯಂತಿಯನ್ನು ಆಚರಿಸಲು ನಮಗೆ ಕರೆನೀಡಿದ್ದಾರೆ. ಈ ನಿಟ್ಟಿನಲ್ಲಿ ಧರ್ಮಪ್ರಾಂತ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಚರ್ಚಿನ ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ನಾ, ಸಂತ ಜೋಸೆಫ್ ಕಾನ್ವೆಂಟಿನ ಮುಖ್ಯಸ್ಥೆ ಭಗಿನಿ ಸುಪ್ರಿಯಾ, ಪಾಲನ ಮಂಡಳಿ ಉಪಾಧ್ಯಕ್ಷೆ ಶಾಲೆಟ್ ರೆಬೆಲ್ಲೊ, ಕಾರ್ಯದರ್ಶಿ ಅಶಾ ಕರ್ವಾಲ್ಲೊ, ಆಯೋಗಗಳ ಸಂಚಾಲಕಿ ಪ್ರೇಮಾ ಡಿಕುನ್ಹಾ, ಧರ್ಮಭಗಿನಿಯರು, ವಾಳೆಯ ಗುರಿಕಾರರು ಪಾಲನ ಮಂಡಳಿ ಸದಸ್ಯರು, ಇಗರ್ಜಿಯ ಹಲವು ಸಂಘ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರು ಹಾಗೂ ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.