ಕುಂದಾಪುರ: ವಾರ್ಷಿಕೋತ್ಸವವು ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆಯನ್ನು ಕಲ್ಪಿಸುತ್ತದೆ. ಸೈಂಟ್ ಮೇರಿಸ್ ಪ.ಪೂ ಕಾಲೇಜ್ ಜ್ಞಾನ ಮತ್ತು ಶಿಸ್ತಿಗೆ ಹೆಸರಾಗಿದ್ದು, ಇಲ್ಲಿ ಕಲಿತ ವಿದ್ಯಾರ್ಥಿಗಳು ಮುಂದೆ ಸಮಾಜದಲ್ಲಿ ಸಾಧನಾಶೀಲರಾಗುವುದು ಖಂಡಿತ ಎಂದು ಕೋಟ ಸಾರ್ವಜನಿಕ ಆಸ್ಪತ್ರೆಯ ವೈದ್ಯ, ರೋಟರಿಯ ಪ್ರಮುಖ ಡಾ.ಸಂದೀಪ ಕುಮಾರ್ ಶೆಟ್ಟಿ ಹೇಳಿದರು.
ಅವರು ಕುಂದಾಪುರದ ಸೈಂಟ್ ಮೇರಿಸ್ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಜಂಟಿ ಕಾರ್ಯದರ್ಶಿ, ಕುಂದಾಪುರ ವಲಯದ ಪ್ರಧಾನ ಧರ್ಮಗುರು ವಂ.ಫಾ.ಸ್ಟ್ಯಾನಿ ತಾವ್ರೊ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಕಾಲೇಜಿನ ಹಳೆ ವಿದ್ಯಾರ್ಥಿನಿ ಡಾ.ಶಿಲ್ಪಾ ಆಗಮಿಸಿ ಶುಭ ಹಾರೈಸಿದರು. ವಿದ್ಯಾರ್ಥಿ ನಾಯಕ ಜೋಯ್ಸನ್ ಡಿ ಸೋಜಾ, ಉಪನಾಯಕಿ ಪ್ರಗತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಸಂಚಾಲಕರಾದ ವಂ.ಫಾ.ಸ್ಟ್ಯಾನಿ ತಾವ್ರೊ, ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕøತ ಕುಂದಾಪುರ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡೋರತಿ ಸುವಾರಿಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕಾಲೇಜಿನ ಪ್ರಾಂಶುಪಾಲೆ ರೇಶ್ಮಾ ಫೆರ್ನಾಂಡಿಸ್ ಸ್ವಾಗತಿಸಿದರು. ಉಪನ್ಯಾಸಕರಾದ ಸುಶ್ಮಾ, ಶರ್ಮಿಳಾ ಮಿನೇಜಸ್, ಶಿಲ್ಪಾಶ್ರೀ ಬಹುಮಾನಿತರ ಪಟ್ಟಿ ವಾಚಿಸಿದರು. ಉಪನ್ಯಾಸಕರಾದ ನಾಗರಾಜ್ ಶೆಟ್ಟಿ, ಪ್ರೀತಿ ಕ್ರಾಸ್ತಾ ಸನ್ಮಾನಿತರನ್ನು ಪರಿಚಯಿಸಿದರು. ಉಪನ್ಯಾಸಕಿ ಪ್ರಫುಲ್ಲಾ ಡಿ.ಸೋಜಾ ದಾನಿಗಳ ಪಟ್ಟಿ ವಾಚಿಸಿದರು. ಉಪ ಪ್ರಾಂಶುಪಾಲೆ ಮಂಜುಳಾ ನಾಯರ್ ವಂದಿಸಿದರು. ವಿದ್ಯಾರ್ಥಿಗಳಾದ ಅಲ್ವಿಟಾ ನಝೆರೇತ್, ಅಲ್ವಿನ್ ಬರೆಟ್ಟೋ ಕಾರ್ಯಕ್ರಮ ನಿರೂಪಿಸಿದರು.